ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವಾಪಟ್ಟಣ: 10 ಲಕ್ಷ ಗಿಡ ನಡೆವ ಅಭಿಯಾನ

Published 6 ಆಗಸ್ಟ್ 2024, 12:59 IST
Last Updated 6 ಆಗಸ್ಟ್ 2024, 12:59 IST
ಅಕ್ಷರ ಗಾತ್ರ

ಬಸವಾಪಟ್ಟಣ: ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಈ ವರ್ಷ ರಾಜ್ಯದಲ್ಲಿ 10 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ನಿರ್ದೇಶಕ ದಿನೇಶ್‌ ಪೂಜಾರಿ ಹೇಳಿದರು.

ಸಮೀಪದ ಹೊಸಳ್ಳಿಯ ವ್ಯಾಸಾಂಜನೇಯ ದೇಗುಲದ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದ ಅವರು, ‘ಪ್ರತಿ ತಾಲ್ಲೂಕಿನಲ್ಲಿ ಐದು ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಹಿಂದೆ ನಮ್ಮ ಸಂಸ್ಥೆಯಿಂದ ದೇವರ ಕಾಡು, ವನಮಹೋತ್ಸವ, ಬೀಜದ ಉಂಡೆಗಳ ಬಿತ್ತನೆಯಂತಹ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಹೇಳಿದರು.

‘ಅರಣ್ಯ ಇಲಾಖೆಯಿಂದ ಸಸಿಗಳನ್ನು ಉಚಿತವಾಗಿ ನೀಡಲಾಗುವುದು. ಪ್ರತಿ ಗಿಡದ ಸಂರಕ್ಷಣೆಗೆ ವರ್ಷಕ್ಕೆ ₹90 ನೀಡಲಾಗುವುದು. ಸಾರ್ವಜನಿಕರು ಅರಣ್ಯ ಇಲಾಖೆಯನ್ನು ಸಂಪರ್ಕಿಸಬಹುದು’ ಎಂದು ವಲಯ ಅರಣ್ಯಾಧಿಕಾರಿ ಬಿ.ಕೆ.ವಿಜಯಕುಮಾರ್‌ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವುಗಾನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ವ್ಯಾಸಾಂಜನೇಯಸ್ವಾಮಿ ದೇಗುಲದ ಕಾರ್ಯದರ್ಶಿ ನಸತ್ಯನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯೆ ನಾಗಮ್ಮ, ಪಿ.ಡಿ.ಒ ರೇಣುಕಾ ಪ್ರಸಾದ್‌ ಪಾಲ್ಗೊಂಡಿದ್ದರು. ಕೃಷಿ ಮೇಲ್ವಿಚಾರಕ ಹನುಮಂತಪ್ಪ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT