ಬಸವಾಪಟ್ಟಣ: ಮನುಷ್ಯರೆಲ್ಲರೂ ಒಂದೇ ಎಂಬ ಹೃದಯ ವೈಶಾಲ್ಯತೆಯನ್ನು ಬೆಳೆಸಿಕೊಂಡು ಮಾನವ ಧರ್ಮವನ್ನು ರಕ್ಷಿಸಿ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ಸಮೀಪದ ಚಿರಡೋಣಿಯಲ್ಲಿ ನೂತನವಾಗಿ ನಿರ್ಮಿಸಿರುವ ವೀರಭದ್ರಸ್ವಾಮಿ ದೇಗುಲದ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮಾನವನ ಸ್ವಾರ್ಥ ಮತ್ತು ಸಂಕುಚಿತ ಧಾರ್ಮಿಕ ಭಾವನೆಯಿಂದ ಪ್ರಪಂಚ ತಲ್ಲಣಗೊಳ್ಳುತ್ತಿದೆ. ಮನುಕುಲದ ಉಳಿವಿಗಾಗಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸಿಕೊಂಡರೆ ವಿಶ್ವದಲ್ಲಿ ಶಾಂತಿ ಸಾಧ್ಯ. ಎಲ್ಲಾ ಧರ್ಮಗಳೂ ಮಾನವನ ಶ್ರೇಯೋಭಿವೃದ್ಧಿಗೆ ಅಗತ್ಯವಾದ ತತ್ವಾದರ್ಶಗಳನ್ನು ನೀಡುರುವುದರಿಂದ ಎಲ್ಲಾ ಧರ್ಮಗಳನ್ನೂ ಸಮನಾಗಿ ನೋಡಬೇಕು ಎಂದರು.

ಚಿರಡೋಣಿ ಗ್ರಾಮದಲ್ಲಿ ಶಿವನ ಅವತಾರವಾದ ವೀರಭದ್ರಸ್ವಾಮಿಯ ದೇಗುಲ ನಿರ್ಮಾಣಕ್ಕೆ ಗ್ರಾಮಸ್ಥರ ಸಹಕಾರ ಪ್ರಶಂಸನೀಯ ಎಂದರು.

ಕಾರ್ಯಕ್ರಮಕ್ಕೂ ಮುನ್ನ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-43-2143068935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.