ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರವೇ ಹೋರಾಟದೊಂದಿಗೆ ಸಮಾಜಮುಖಿಯೂ ಆಗಿರಲಿ

ಜ್ಞಾನಕಾಶಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್
Last Updated 25 ಅಕ್ಟೋಬರ್ 2021, 4:05 IST
ಅಕ್ಷರ ಗಾತ್ರ

ದಾವಣಗೆರೆ: ನಾಡು, ನುಡಿ,ನೆಲ, ಜಲ ರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಿರಂತರ ಹೋರಾಟ ಮಾಡುತ್ತಿದ್ದಾರೆ. ಅದರ ಜತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನಿ ಶಿವಕುಮಾರ್ ಸಲಹೆ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ನಗರದ ಗುರು ಭವನದಲ್ಲಿ ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಏರ್ಪಡಿಸಿದ್ದ ಜ್ಞಾನಕಾಶಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ರಕ್ಷಣಾ ವೇದಿಕೆಯು ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಗಳಿಸಿರುವ ಮಕ್ಕಳಿಗೆ ಪುರಸ್ಕಾರ ನೀಡುತ್ತಿರುವುದು ಸಂತಸದ ಸಂಗತಿ ಎಂದರು.

ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ‘ಬ್ಯಾಂಕ್‌ ವ್ಯಸವ್ಥಾಪಕ ಹುದ್ದೆ ಸೇರಿ ಎಲ್ಲ ಹುದ್ದೆಗಳಿಗೂ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ಮತ್ತು ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಬೇಕು’ ಎಂದು ಒತ್ತಾಯಿಸಿದರು.

ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವದಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಕನ್ನಡಡ ಬಾವುಟ ಹಾರಿಸಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಿರಂಜನಮೂರ್ತಿ, ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಕರವೇ ಪದಾಧಿಕಾರಿಗಳಾದ ವಾಸುದೇವ ರಾಯ್ಕರ್, ಶ್ರೀನಿವಾಸ್ ಚಿನ್ನಿಕಟ್ಟಿ, ಮಂಜುಳಮ್ಮ, ಸುರೇಶ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT