ಸೋಮವಾರ, ನವೆಂಬರ್ 30, 2020
25 °C

ಕರಡಿ ದಾಳಿ: ವೃದ್ಧನಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ತಾಲ್ಲೂಕಿನ ಬಯಲುದಿಬ್ಬ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದನ ಮೇಯಿಸುತ್ತಿದ್ದ ವೃದ್ಧರೊಬ್ಬರಿಗೆ ಕರಡಿ ದಾಳಿ ನಡೆಸಿದ್ದು, ತೀವ್ರ ಗಾಯಗಳಾಗಿವೆ.

ಬಯಲುದಿಬ್ಬ ಗ್ರಾಮದ ಮಂಜಪ್ಪ (67) ಗಾಯಗೊಂಡವರು. ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಕರಡಿ ಮಂಜಪ್ಪ ಅವರ ಕಣ್ಣು, ಮೂಗು, ಮುಖಕ್ಕೆ ಗಾಯ ಮಾಡಿದೆ. 

ಗಂಭೀರವಾಗಿ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಮಾವಿನಹೊಳೆಯಪ್ಪ ತಿಳಿಸಿದ್ದಾರೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.