ಭಾನುವಾರ, ಜೂನ್ 26, 2022
22 °C
pv16mbr1

ಮಲೇಬೆನ್ನೂರು: ಬೇಡ ಜಂಗಮ ಜಾತಿ ಪ್ರಮಾಣ ಪತ್ರ ತೋರಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಲೇಬೆನ್ನೂರು: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ. ವಾಗೀಶ್ ಸ್ವಾಮಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದಿರುವುದನ್ನು ತೋರಿಸಲು ಆಗ್ರಹಿಸಿ ಪಟ್ಟಣದಲ್ಲಿ ಬಹುಜನ ಸಮಾಜ ಪಕ್ಷದ ನೇತೃತ್ವದಲ್ಲಿ ನಾಡ ಕಚೇರಿ ಎದುರು ಪ್ರತಿಭಟನೆ
ನಡೆಸಿದರು.

ಮುಂದುವರಿದ ಸಮಾಜದವರು ಸುಳ್ಳು ಹೇಳಿಕೊಂಡು ಪರಿಶಿಷ್ಟರ ಹಕ್ಕು ಕಸಿಯುತ್ತಿದ್ದಾರೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಡಿ. ಹನುಮಂತಪ್ಪ ಆರೋಪಿಸಿದರು.

‘ಬೇಡ ಜಂಗಮ ಪ್ರಮಾಣಪತ್ರ ಪಡೆದ ವ್ಯಕ್ತಿ ಮೇ 14ರೊಳಗೆ ಪತ್ರಿಕಾಗೋಷ್ಠಿಯಲ್ಲಿ ಎಲ್ಲ ತಿಳಿಸುವ ಭರವಸೆ ನೀಡಿದ್ದರು. ಮೇ 16 ಆದರೂ ಇನ್ನೂ ತಿಳಿಸದ ಕಾರಣ ಧರಣಿ ನಡೆಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಇನ್ನೂ ತೀವ್ರವಾಗಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪುರಸಭಾ ಸದಸ್ಯರಾದ ಬೋವಿ ಶಿವು, ಸಾಬೀರ್ ಅಲಿ, ಕಡ್ಲೆಗೊಂದಿ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಣ್ಣ, ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಎಚ್. ಮಲ್ಲೇಶ್, ಆನಂದಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಕೇಶವ್, ಪುರಸಭಾ ಮಾಜಿ ನಾಮನಿರ್ದೇಶಿತ ಸದಸ್ಯ ಎ.ಕೆ. ನರಸಿಂಹಪ್ಪ, ಕುರ್ಕಿ ಮಂಜಪ್ಪ, ರಾಜಪ್ಪ, ಕರಿಬಸಪ್ಪ, ಡಿ.ಎಂ. ಕೊಪ್ಪದ್, ನಾಗರಾಜ್ ಇದ್ದರು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಭದ್ರತೆ ಒದಗಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು