ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪತ್‌ಕಾಲದ ಪರಿಹಾರ ನೀಡಲು ಬೀಡಿ ಕಾರ್ಮಿಕರ ಮನವಿ

Last Updated 7 ಜುಲೈ 2021, 10:15 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಬೀಡಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಡಿ ಕಾರ್ಮಿಕರಿಗೆ ಆಪತ್‌ಕಾಲದ ಪರಿಹಾರ ನೀಡಬೇಕು ಎಂದು ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ನೇತೃತ್ವದಲ್ಲಿ ಮಂಗಳವಾರ ಸಹಾಯಕ ಕಾರ್ಮಿಕ ಆಯುಕ್ತರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಆಪತ್‌ಕಾಲದ ಪರಿಹಾರವಾಗಿ ₹ 10 ಸಾವಿರವನ್ನು ನೇರವಾಗಿ ಕಾರ್ಮಿಕ ಮಹಿಳೆಯರ ಖಾತೆಗೆ ಹಾಕಬೇಕು. ಸರ್ಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ, ಗೋಧಿ ಜೊತೆಗೆ ಬೇಳೆಕಾಳು, ಅಡುಗೆಎಣ್ಣೆ ಮುಂತಾದ ಅಗತ್ಯ ಸಾಮಗ್ರಿ ನೀಡಬೇಕು. ಬೀಡಿ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಲಾಯಿತು.

ಯೂನಿಯನ್‌ ಅಧ್ಯಕ್ಷೆ ಜಬೀನಾ ಖಾನಂ, ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ ಎಂ., ಸದಸ್ಯರಾದ ಹಸೀನ ಬಾನು, ಶಾಹಿನ ಬಾನು, ಶಾಹಿನ, ರಾಷಿದ ಬಿ., ನಸೀಮ ಬಾನು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT