ಬೀರೇಶ್ವರ ವಿದ್ಯಾವರ್ಧಕ ಶಾಲೆಗೆ ಶಂಕುಸ್ಥಾಪನೆ 12ರಂದು

7

ಬೀರೇಶ್ವರ ವಿದ್ಯಾವರ್ಧಕ ಶಾಲೆಗೆ ಶಂಕುಸ್ಥಾಪನೆ 12ರಂದು

Published:
Updated:

ದಾವಣಗೆರೆ: ಬೀರೇಶ್ವರ ವಿದ್ಯಾವರ್ಧಕ ಸಂಘದಿಂದ ಸ್ಥಾಪಿಸಲು ಉದ್ದೇಶಿಸಿರುವ ಶಾಲೆ ಮತ್ತು ವಸತಿನಿಲಯದ ಶಂಕುಸ್ಥಾಪನೆ ಸಮಾರಂಭ ಆಗಸ್ಟ್‌ 12ರಂದು ಬೆಳಿಗ್ಗೆ 11ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆಂಗೋ ಹನುಮಂತಪ್ಪ ಹೇಳಿದರು.

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸುವರು. ಸಮಾಜದ ಹಿರಿಯ ಮುಖಂಡ ಕೆ. ಮಲ್ಲಪ್ಪ ಅಧ್ಯಕ್ಷತೆ ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ, ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಅರಣ್ಯ ಸಚಿವ ಆರ್‌. ಶಂಕರ್, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್.ಎ. ರವೀಂದ್ರನಾಥ್ ಅವರೂ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಮಾರಂಭಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಜೆ.ಎಚ್‌. ಪಟೇಲ್‌ ಬಡಾವಣೆಯಲ್ಲಿ ಶಾಲೆ ಮತ್ತು ವಸತಿ ನಿಲಯಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪರಶುರಾಮಪ್ಪ, ಜೆ.ಕೆ. ಕೊಟ್ರಬಸಪ್ಪ, ಎಚ್‌.ಎನ್‌. ಗುರುನಾಥ್, ಕುಂದವಾಡ ಗಣೇಶಪ್ಪ, ಮಂಜುನಾಥ್, ಎಸ್‌.ಎಸ್. ಗಿರೀಶ್‌, ಬಿ.ಎಂ. ಸತೀಶ್, ಸಿದ್ದಪ್ಪ ಅಡಾನಿ, ಶ್ರೀನಿವಾಸ್, ಬಿ. ನಿಂಗರಾಜ್‌ ಅವರೂ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !