ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಜಲಾಶಯ | ನೀರು ಹರಿಸುವ ದಿನಾಂಕ ನಿಗದಿಪಡಿಸಲಿ: ಶಾಸಕ ಹರೀಶ್ ಆಗ್ರಹ

Published 8 ಆಗಸ್ಟ್ 2023, 15:43 IST
Last Updated 8 ಆಗಸ್ಟ್ 2023, 15:43 IST
ಅಕ್ಷರ ಗಾತ್ರ

ದಾವಣಗೆರೆ: ‘ಭದ್ರಾ ಜಲಾಶಯದಿಂದ ನೀರು ಹರಿಸುವ ಸಂಬಂಧ ನೀರಾವರಿ ಸಲಹಾ ಸಮಿತಿ ಸಭೆಯ ದಿನಾಂಕವನ್ನು ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಬೇಕು’ ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ಆಗ್ರಹಿಸಿದರು.

‘ಸಂಪ್ರದಾಯದಂತೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರು ಹರಿಸುವ ದಿನಾಂಕವನ್ನು ಘೋಷಿಸಲಾಗುತ್ತದೆ. ಹಾಗಾಗಿ ಸಭೆ ಯಾವಾಗ ನಡೆಯುತ್ತದೆ ಎಂದು ಕ್ಷೇತ್ರದ ಜನರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಆಗಸ್ಟ್ 10ರಂದು ಜಲಾಶಯದಿಂದ ನೀರು ಹರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಇನ್ನು ಒಂದೇ ದಿವಸ ಬಾಕಿ ಇದ್ದು, ನೀರಾವರಿ ಇಲಾಖೆಯು ಅಧಿಕೃತ ದಿನಾಂಕ ಘೋಷಿಸಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಕಾಂಗ್ರೆಸ್‌ನವರು ವರ್ತನೆ ತಿದ್ದಿಕೊಳ್ಳಲಿ

‘ಆ.6ರಂದು ನಡೆದ ‘ಗೃಹಜ್ಯೋತಿ’ ಯೋಜನೆಗೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಂಡ ರೀತಿ ಸರಿಯಲ್ಲ. ಶಾಸಕ ಬಸವಂತಪ್ಪ ಅವರು ಕಾಂಗ್ರೆಸ್‌ಗೆ ಜೈಕಾರ ಹಾಕಿದರು. ಆದರೆ ಕೂಡಲೇ ತಮ್ಮ ತಪ್ಪನ್ನು ಮನವರಿಕೆ ಮಾಡಿಕೊಂಡರು. ಆದರೆ ಕಾಂಗ್ರೆಸ್ ಕಾರ್ಯಕರ್ತರು ವರ್ತಿಸಿದ ರೀತಿ ಸರಿಯಲ್ಲ. ಅವರು ತಮ್ಮ ವರ್ತನೆ ಬದಲಾಯಿಸಿಕೊಳ್ಳಬೇಕು. ಪ್ರಧಾನಿಯವರು ಜನರ ಖಾತೆಗೆ ₹ 15 ಲಕ್ಷ ಹಾಕುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಹೇಳಿರುವುದಕ್ಕೆ ದಾಖಲೆ ನೀಡಲಿ’ ಎಂದು ಸವಾಲು ಹಾಕಿದರು.

‘ಇಂದಿರಾಗಾಂಧಿ ಕಾಲದಿಂದಲೂ ಗರೀಬಿ ಹಠಾವೋ ಎನ್ನುವ ಕಾಂಗ್ರೆಸ್‌ನವರಿಗೆ ದೇಶ ಬಡತನದಲ್ಲಿರುವುದೇ ಬೇಕು ಎನಿಸುತ್ತದೆ. ಕಾಂಗ್ರೆಸ್ ಅಗ್ಗದ ಜನಪ್ರಿಯತೆಗೋಸ್ಕರ ಜನರಿಗೆ ಆಮಿಷವೊಡ್ಡುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಕೋವಿಡ್ ಅವಧಿಯಲ್ಲಿ ಜಿಲ್ಲೆಯಲ್ಲಿ ಹಗರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆರೋಪಿಸುತ್ತಿದ್ದಾರೆ. ಆದರೆ ಭ್ರಷ್ಟಾಚಾರ ಮಾಡಿದ ಅಧಿಕಾರಿಯನ್ನು ತಮ್ಮ ಪಕ್ಕದಲ್ಲೇ ಕುಳ್ಳರಿಸಿಕೊಂಡಿದ್ದಾರೆ. ಹಗರಣವಾಗಿದ್ದರೆ ತನಿಖೆ ಮಾಡಲಿ. ಎಂದು ಸವಾಲು ಹಾಕಿದರು.

‘ಶಾಸಕರ ಮೇಲೆ ಕಾಂಗ್ರೆಸ್‌ನವರು ಅನವಶ್ಯಕವಾಗಿ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಇಡೀ ಭಾರತವನ್ನೇ ಗೆದ್ದಂತೆ ವರ್ತಿಸುತ್ತಿದ್ದಾರೆ. ಬಿಜೆಪಿವರ ಮೇಲೆ ಶೇ 40ರಷ್ಟು ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್‌ನವರು ಈಗ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಊಟ– ತಿಂಡಿಗಳ ದರದಂತೆ ವರ್ಗಾವಣೆಗೂ  ಹಣವನ್ನು ನಿಗದಿಪಡಿಸಲಾಗಿದೆ’ ಎಂದು ಆರೋಪಿಸಿದರು.

‘ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ಒತ್ತುವರಿಯಾಗಿರುವುನ್ನು ತೆರವುಗೊಳಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದು, ದಾವಣಗೆರೆಯನ್ನು ಸಿದ್ದರಾಮೋತ್ಸವಕ್ಕೆ ಬಳಸಿಕೊಳ್ಳುವುದಲ್ಲ. ತೆರವು ಕಾರ್ಯಾಚರಣೆಯನ್ನು ಇಲ್ಲಿಂದಲೇ ಆರಂಭಿಸಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT