ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗೀರಥ ಮಹರ್ಷಿ ಚೈತನ್ಯದ ಚಿಲುಮೆ: ಜಿಲ್ಲಾಧಿಕಾರಿ ವೆಂಕಟೇಶ್

Published 15 ಮೇ 2024, 5:17 IST
Last Updated 15 ಮೇ 2024, 5:17 IST
ಅಕ್ಷರ ಗಾತ್ರ

ದಾವಣಗೆರೆ: ‘ಭಗೀರಥ ಮಹರ್ಷಿ ತನ್ನ ಘೋರ ತಪಸ್ಸಿನ ಮೂಲಕ ಕಠಿಣ ಕಾರ್ಯ ಪೂರೈಸಿ ಪವಿತ್ರ ಗಂಗೆಯನ್ನು ಭೂಮಿಗೆ ತಂದ ಚೈತನ್ಯದ ಚಿಲುಮೆ, ಛಲಗಾರ’ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದಾವಣಗೆರೆ ಉಪ್ಪಾರ ಸಮುದಾಯದ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತ್ಯುತ್ಸವದಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

‘ಭಗೀರಥನ ಸಾಹಸಗಾಥೆಯು ನಿರ್ಣಯ, ಭಕ್ತಿ ಹಾಗೂ ಅಸಾಧ್ಯವಾದುದನ್ನು ಕಠಿಣ ಪ್ರಯತ್ನದ ಮೂಲಕ ಸಾಧ್ಯ ಮಾಡುವುದನ್ನು ತೋರಿಸಿಕೊಟ್ಟವರು. ಭಗೀರಥ ಮಹರ್ಷಿ ತನ್ನ ಘೋರ ತಪಸ್ಸಿನಿಂದ ಪವಿತ್ರ ಗಂಗೆಯನ್ನು ಭೂಮಿಗೆ ತಂದು ತನ್ನ ಹಿರಿಯರಿಗೆ ಜಲತರ್ಪಣ ಮಾಡಿದ ಭಗೀರಥನ ಸಾಧನೆ ಅಸಾಮಾನ್ಯ. ಇದು ಪರಿಶ್ರಮ ಮತ್ತು ಕಠಿಣ ನಿರ್ಣಯಗಳ ಮೂಲಕ ಜಯ ಸಾಧಿಸಬಹುದು ಎಂಬ ಮುನ್ನುಡಿ ಬರೆದವರು ಭಗೀರಥ ಮಹಿರ್ಷಿ. ಸದಾ ಅವರ ಮಾರ್ಗದಲ್ಲಿ ನಡೆಯುವಂತಾಗಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ರಮೇಶ್ ಎಂ.ಸಿ., ತಾಲ್ಲೂಕು ಉಪ್ಪಾರ ಸಂಘದ ಅಧ್ಯಕ್ಷ ಗಿರೀಶ್ ಕೆ.ಬಿ., ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಲೋಕೇಶ್, ಪ್ರಧಾನ ಕಾರ್ಯದರ್ಶಿ ಮಾರುತಿ ಎಚ್.ಡಿ., ರಾಜ್ಯ ಭಗೀರಥ ನೌಕರರ ಸಂಘದ ಅಧ್ಯಕ್ಷ ಎನ್.ಎಸ್.ಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳನಾಯ್ಕ್, ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಇದ್ದರು.
                                   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT