ಬುಧವಾರ, ಅಕ್ಟೋಬರ್ 20, 2021
24 °C

ಬೆಳೆ ಸುರಿದು ಪ್ರತಿಭಟನೆ: ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ, ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ  ರೈತ ಸಂಘಟನೆಗಳು ಈರುಳ್ಳಿ, ಎಲೆಕೋಸು, ನುಗ್ಗೆಕಾಯಿ ಸುರಿದು ಪ್ರತಿಭಟನೆ ನಡೆಸಿ, ಬೆಲೆ ಕುಸಿತಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಮುಂಜಾನೆಯಿಂದಲೇ ಪ್ರತಿಭಟನೆ ಆರಂಭಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಸ್‌ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿ ಮುಖಂಡರು ಬಸ್ ಸಂಚಾರ ಆರಂಭಿಸದಂತೆ ಚಾಲಕರು ಹಾಗೂ ನಿರ್ವಾಹಕರಿಗೆ ಮನವಿ ಮಾಡಿದರು. ಅಲ್ಲದೇ  ಬಸ್ ಗಳು ನಿಲ್ದಾಣದಿಂದ ಹೊರಹೋಗದಂತೆ ತಡೆದರು. ಬಳಿಕ. ಸ್ಥಳಕ್ಕೆ ಬಂದ ಪೊಲೀಸರು  ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

ದಾವಣಗೆರೆ  ಜಿಲ್ಲಾ ಪಂಚಾಯಿತಿ ಎದುರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ಮುಂದಾಗಿದ್ದ 20ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರ ವಿರುದ್ಧ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು