ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಕರ್ತವ್ಯಕ್ಕೆ ಗೈರು: ಎಇಇ, ಬಿಲ್ ಕಲೆಕ್ಟರ್ ಅಮಾನತು

Published 2 ಮೇ 2024, 7:04 IST
Last Updated 2 ಮೇ 2024, 7:04 IST
ಅಕ್ಷರ ಗಾತ್ರ

ಹೊನ್ನಾಳಿ (ದಾವಣಗೆರೆ ಜಿಲ್ಲೆ): ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಗೈರಾಗಿದ್ದ ಕಾರಣಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್‌ ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಅಮಾನತು ಮಾಡಿ ಆದೇಶಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಎಇಇ ಕಣವಪ್ಪ, ನ್ಯಾಮತಿ ತಾಲ್ಲೂಕಿನ ಯರಗನಾಳು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಲೋಕೇಶನಾಯ್ಕ ಅಮಾನತುಗೊಂಡವರು. 

‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಜೀನಹಳ್ಳಿ ಚೆಕ್‍ಪೋಸ್ಟ್‌ನಲ್ಲಿ ಎಸ್.ಎಸ್.ಟಿ ತಂಡದಲ್ಲಿ ಸೇವೆ ಸಲ್ಲಿಸುವಂತೆ ಈ ಇಬ್ಬರನ್ನು ನೇಮಕ ಮಾಡಲಾಗಿತ್ತು. ಏಪ್ರಿಲ್‌ 29ರಂದು ವಿಶೇಷ ವೆಚ್ಚ ವೀಕ್ಷಕರು ಮತ್ತು ಸಹಾಯಕ ಚುನಾವಣಾಧಿಕಾರಿ ಚೆಕ್‍ಪೋಸ್ಟ್‌ಗೆ ಅನಿರೀಕ್ಷಿತ ಭೇಟಿ ನೀಡಿದಾಗ ಈ ಇಬ್ಬರು ಸ್ಥಳದಲ್ಲಿ ಇರಲಿಲ್ಲ. ಈ ಬಗ್ಗೆ ಎಚ್ಚರಿಸಿದ ಬಳಿಕವೂ ಗೈರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಚುನಾವಣಾಧಿಕಾರಿ ಅಮಾನತು ಮಾಡಿದ್ದಾರೆ’ ಎಂದು ಸಹಾಯಕ ಚುನಾವಣಾಧಿಕಾರಿ ವಿ. ಅಭಿಷೇಕ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT