ಆಪರೇಷನ್ ಕಮಲಕ್ಕೆ ನಾವು ಕೈ ಹಾಕುವುದಿಲ್ಲ: ಶ್ರೀರಾಮುಲು

ಬುಧವಾರ, ಜೂನ್ 26, 2019
22 °C

ಆಪರೇಷನ್ ಕಮಲಕ್ಕೆ ನಾವು ಕೈ ಹಾಕುವುದಿಲ್ಲ: ಶ್ರೀರಾಮುಲು

Published:
Updated:

ದಾವಣಗೆರೆ: ಆಪರೇಷನ್ ಕಮಲಕ್ಕೆ ನಾವು ಕೈ ಹಾಕುವುದಿಲ್ಲ. ಆಪರೇಷನ್ ಕಮಲದಿಂದ ದೂರವಿರುವಂತೆ ಹೈ ಕಮಾಂಡ್ ಹೇಳಿದೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದರು.

ರಾಜನಹಳ್ಳಿ ಗುರುಪೀಠದಲ್ಲಿ ಪಾದಯಾತ್ರೆ ವೇಳೆ ಮಾತನಾಡಿ, ಸದ್ಯ ಸಮ್ಮಿಶ್ರ ಸರ್ಕಾರ ಒಡೆದ ಮನೆ ಇದ್ದಂತಿದೆ. ಒಡೆದ ಮನೆಯಲ್ಲಿ ಯಾವ ರೀತಿ ಸಂಸಾರ ಮಾಡಲು ಆಗುವುದಿಲ್ಲವೋ ಅದೇ ರೀತಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಒಡೆದ ಮನೆಯಲ್ಲಿ ಸಮ್ಮಿಶ್ರ ಸರ್ಕಾರ ಸಂಸಾರ ಮಾಡುತ್ತಿದೆ. ಅದು ಬಹಳ ದಿನ ಇರೋದಿಲ್ಲ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಅದರ ಬಗ್ಗೆ ಸಮ್ಮಿಶ್ರ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬಿಜೆಪಿ ಬರ ಪ್ರವಾಸ ಮಾಡಿ ಜನರ ಸಮಸ್ಯೆ ಅಲಿಸುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಅರಾಜಕತೆ ಇದೆ. ಇದರಿಂದ ಶಾಸಕರು, ಸಚಿವರು ಕುಣಿದು ಕುಪ್ಪಳಿಸುತ್ತಾರೆ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !