ತ್ಯಾವಣಿಗೆ: ರಾಜ್ಯದಲ್ಲಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಗ್ರಾಮೀಣ ಮಂಡಲ ವತಿಯಿಂದ ತ್ಯಾವಣಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಕಾರ್ಯಕರ್ತರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ರಾಜ್ಯ ಸರ್ಕಾರದ ನಡೆ ವಿರುದ್ಧ ಪ್ರತಿಭಟಿಸಿದರು. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನೆರವಾಗಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ಸರ್ಕಾರ ತೊಂದರೆಯುಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿ ದೊರೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ತೆರೆದಿರುವ ಕೇಂದ್ರದಗಳನ್ನು ಮುಚ್ಚಬಾರದು. ರಾಜ್ಯ ಸರ್ಕಾರ ತನ್ನ ಆದೇಶವನ್ನು ಕೊಡಲೇ ಹಿಂಪಡಿಯಬೇಕು ಎಂದು ಮಂಡಲ ಅಧ್ಯಕ್ಷ ಸಚಿನ್ ಬಿ.ಜಿ. ಒತ್ತಾಯಿಸಿದರು.

ಸರ್ಕಾರವು ಜನೌಷಧ ಕೇಂದ್ರಗಳನ್ನು ಮುಚ್ಚಿ ಡ್ರಗ್ಸ್ ಮಾಫಿಯಾ ಮೂಲಕ ಎಲ್ಲ ಖಾಸಗಿ ಔಷಧ ಅಂಗಡಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊರಟಿದೆ ಎಂದು ಪ್ರತಿಭಟನನಿರತರು ಆರೋಪಿಸಿದರು.

ಮಾಜಿ ಶಾಸಕ ಎಂ.ಬಸವರಾಜ್ ನಾಯ್ಕ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಅನಿಲ್ ನಾಯ್ಕ್, ಎಸ್.ಟಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಕೃಷ್ಣಪ್ಪ, ಮಲ್ಲಿಕಾರ್ಜುನ್, ಡಿ.ಆರ್. ಹಾಲೇಶ್, ಪ್ರಶಾಂತ್, ಷಣ್ಮುಖಪ್ಪ, ಶಿವು, ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.