ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮೂರನೇ ಬಾರಿಗೆ ಪ್ರಧಾನಿ ಗ್ಯಾರಂಟಿ: ಶೋಭಾ ಕರಂದ್ಲಾಜೆ

ಹೊನ್ನಾಳಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರೋಡ್‌ಶೋ
Published 3 ಮೇ 2024, 5:23 IST
Last Updated 3 ಮೇ 2024, 5:23 IST
ಅಕ್ಷರ ಗಾತ್ರ

ಹೊನ್ನಾಳಿ: ‘ದೇಶದ ಭದ್ರತೆಗಾಗಿ ನರೇಂದ್ರ ಮೋದಿ ಅನಿವಾರ್ಯವಾಗಿದ್ದು, ಮೂರನೇ ಬಾರಿಗೆ ಅವರು ಪ್ರಧಾನಿಯಾಗಿ ಅಭಿವೃದ್ಧಿ ಮಾಡುವುದು ಗ್ಯಾರಂಟಿ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಗುರುವಾರ ಪಟ್ಟಣದಲ್ಲಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ರೋಡ್‍ಶೋ ಕಾರ್ಯಕ್ರಮದ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಫಲಾನುಭವಿಗಳಿಗೆ ಕೇಂದ್ರದಿಂದ 5 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ. ಎಲ್ಲ ಬಡವರ ಮನೆಗೂ ಗ್ಯಾಸ್ ಸಿಲಿಂಡರ್ ಸಂಪರ್ಕ ನೀಡಿ ಹೊಗೆರಹಿತ ಅಡುಗೆಮನೆ ಸಾಧ್ಯ ಮಾಡಲಾಗಿದೆ. 28,000 ಹಳ್ಳಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಎಲ್ಲಾ ಅಂಶಗಳು ಅಭಿವೃದ್ಧಿಯನ್ನು ಪ್ರತಿಬಿಂಬಿಸುವುದಿಲ್ಲವೇ’ ಎಂದು ಪ್ರಶ್ನಿಸಿದರು.

ದಾವಣಗೆರೆ ಲೋಕಸಭಾ ಅಭ್ಯರ್ಥಿ ಹಾಯತ್ರಿಸಿದ್ದೇಶ್ವರ ಮಾತನಾಡಿ, ‘50 ವರ್ಷಗಳಲ್ಲಿ ಮಾಡಬೇಕಾದ ಅಭಿವೃದ್ಧಿಯನ್ನು ಕೇವಲ 10 ವರ್ಷಗಳಲ್ಲಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಇದು ಕೇವಲ ‘ಟ್ರಯಲ್’. ಮುಂದೆ ಪೂರ್ಣಪ್ರಮಾಣದ ಅಭಿವೃದ್ಧಿ ‘ಪಿಕ್ಚರ್’ ಬಾಕಿ ಇದೆ ಎಂದು ಮೋದಿ ಅವರು ಹೇಳಿದ್ದಾರೆ. ಪೂರ್ಣ ಪಿಕ್ಚರ್ ವೀಕ್ಷಿಸಲು ಕಮಲಕ್ಕೆ ಮತ ಚಲಾಯಿಸಿ’ ಎಂದರು.

ಸೂರ್ಯ, ಚಂದ್ರರಿರುವುದು ಎಷ್ಟು ಸತ್ಯವೋ ದಾವಣಗೆರೆ ಲೋಕಸಭಾ ಅಭೈರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಗೆಲುವ ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜೆ.ಕೆ.ಸುರೇಶ್ ಸ್ವಾಗತಿಸಿದರು. ಇದಕ್ಕೂ ಮುನ್ನ ಪಟ್ಟಣದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರೋಡ್‍ಶೋ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT