ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ನಿರಾಣಿ

ಶುಕ್ರವಾರ, ಏಪ್ರಿಲ್ 26, 2019
35 °C

ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ನಿರಾಣಿ

Published:
Updated:
Prajavani

ದಾವಣಗೆರೆ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ 24 ಗಂಟೆಗಳ ಒಳಗೆ ಕಾಂಗ್ರೆಸ್‌ ತನ್ನ ಬೆಂಬಲವನ್ನು ಹಿಂಪಡೆಯಲಿದೆ. ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಶಾಸಕ ಮುರುಗೇಶ್ ನಿರಾಣಿ ಭವಿಷ್ಯ ನುಡಿದರು.

ಮೇ 23ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳು ಆಗಲಿವೆ. ಬಿ.ಎಸ್. ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆ. ಆಪರೇಷನ್‌ ಕಮಲ ಮಾಡುವ ಪ್ರಮೇಯವೇ ಬರುವುದಿಲ್ಲ. ಸರ್ಕಾರ ರಚಿಸಲು ಅಗತ್ಯ ಇರುವಷ್ಟು ಶಾಸಕರು ಸ್ವ ಇಚ್ಛೆಯಿಂದಲೇ ಬಿಜೆಪಿಗೆ ಬರಲಿದ್ದಾರೆ. ಯಾರು ಎಂಬುದನ್ನು ಕಾದು ನೋಡಿ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲಲಿದೆ. ದೇಶದಲ್ಲಿ 300ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !