ಜಗಳೂರು:ಪಟ್ಟಣದ ಬಯಲುರಂಗಮಂದಿರ ಆವರಣದಲ್ಲಿ ನವೆಂಬರ್ 22ರಂದು ಜನಸಂಕಲ್ಪ ಯಾತ್ರೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು.ಯಾತ್ರೆ ಯಶಸ್ವಿಗೆ ಸಕಲ ಸಿದ್ಧತೆ ನಡೆಸಬೇಕಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು.ರಾಜ್ಯ ಸರ್ಕಾರದ ಆಡಳಿತ ಅವಧಿಯ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಲು ಜನಸಂಕಲ್ಪ ಯಾತ್ರೆಯನ್ನು ನಡೆಸಲಾಗುತ್ತಿದೆ. ಪಟ್ಟಣದಲ್ಲಿ ರಸ್ತೆಗಳ ದುರಸ್ತಿ, ನೀರಿನ ಸೌಕರ್ಯ, ಸ್ವಚ್ಛತೆ, ಭದ್ರತೆಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ30 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಮುಖಂಡರು ಭಾಗಿಯಾಗುವ ನಿರೀಕ್ಷೆಯಿದೆ ಎಂದರು.

ಜನವರಿ 14ರಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಹೊನಲು ಬೆಳಕಿನ ಮಹಿಳಾ ಹಾಗೂ ಪುರುಷರ ವಿಭಾಗದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.

ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.