ದಾವಣಗೆರೆ: ಲೋಕಸಭಾ ಚುನಾವಣೆಯ ನಂತರ ಮೂಡಿದ್ದ ವೈಮನಸ್ಸು ಮರೆತ ಬಿಜೆಪಿ ನಾಯಕರು, ಎರಡು ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಒಗ್ಗೂಡಿ ಹೋರಾಟ ನಡೆಸುವುದಾಗಿ ಕಾರ್ಯಕರ್ತರಿಗೆ ವಾಗ್ದಾನ ನೀಡಿದರು.

ನಗರದ ಎಂಸಿಸಿ ಬಡಾವಣೆಯ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಬಿಜೆಪಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ವೈಮನಸು ಮರೆತು ಒಗ್ಗೂಡಲು ವೇದಿಕೆಯಾಯಿತು.

ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬಣದ ನಾಯಕರು ಪರಸ್ಪರ ಕೈಕೈ ಹಿಡಿದು ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದರು. ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಗೆಲುವಿಗೆ ಶ್ರಮಿಸುವುದಾಗಿ ಶಪಥ ಮಾಡಿದರು. ಇದಕ್ಕೆ ಎನ್ಡಿಎ ಮಿತ್ರಪಕ್ಷ ಜೆಡಿಎಸ್ ನಾಯಕರು ಸಾಕ್ಷಿಯಾದರು.

ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ‘ಉಪಚುನಾವಣೆಯ ಫಲಿತಾಂಶ 2028ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಆಗಲಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.

‘ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷ ಹಾಗೂ ನಾಯಕರ ಕುರಿತು ಸಂದೇಶಗಳು ಹರಿದಾಡುತ್ತಿವೆ. ಇದರಲ್ಲಿ ಬಣ ರಾಜಕಾರಣದ ಬಗ್ಗೆ ಪ್ರಚೋದನಾಕಾರಿ ವಿಷಯಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಇದಕ್ಕೆ ಕಾರ್ಯಕರ್ತರು ಗಮನಕೊಡುವ ಅಗತ್ಯವಿಲ್ಲ. ಬಿಜೆಪಿಗೆ ಹಿಂದೂ ಒಂದೇ ಜಾತಿ. ಎಲ್ಲರೂ ಒಗ್ಗೂಡಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ’ ಎಂದು ಕರೆ ನೀಡಿದರು.

‘ಟಿಕೆಟ್ ಘೋಷಣೆಯಾದ ಬಳಿಕ ಪಕ್ಷದಲ್ಲಿ ಕೆಲ ಸಣ್ಣಪುಟ್ಟ ಅಸಮಾಧಾನಗಳು ಸೃಷ್ಟಿಯಾಗಿದ್ದವು. ಟಿಕೆಟ್ ಆಕಾಂಕ್ಷಿ ಆಗಿದ್ದ ಬಿ.ಜಿ. ಅಜಯ್ಕುಮಾರ್ ಅವರೊಂದಿಗೆ ಚರ್ಚಿಸಿ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಪಕ್ಷದ ಹಿತದೃಷ್ಟಿಯಿಂದ ಒಗ್ಗೂಡಿ ಕೆಲಸ ಮಾಡಲು ಸಿದ್ಧರಾಗಿದ್ದೇವೆ. ಶ್ರೀನಿವಾಸ್ ದಾಸಕರಿಯಪ್ಪ ಅವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಲಿದ್ದೇವೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

‘ಅಜಯ್ಕುಮಾರ್ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದು ನಿಜ. ನನ್ನ ಮನಸಿನಲ್ಲಿ ಕಲ್ಮಶವಿಲ್ಲ. ಮುಖವಾಡ ಹಾಕಿಕೊಂಡು ಕೆಲಸ ಮಾಡುವುದಿಲ್ಲ’ ಎಂದರು.

‘ಅಲ್ಪಸಂಖ್ಯಾತರಲ್ಲಿ ಬಿಜೆಪಿ ವಿರೋಧ ಮಾಡುವ ಮನಸ್ಥಿತಿಯನ್ನು ಕಾಂಗ್ರೆಸ್ ಬೆಳೆಸಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಏನು ಎಂಬುದು ಈಗ ಅರ್ಥವಾಗಿದೆ. ಬಿಜೆಪಿಗೆ ಈ ಚುನಾವಣೆಯಲ್ಲಿ ಉತ್ತಮ ಅವಕಾಶವಿದೆ. ಪಕ್ಷದಲ್ಲಿರುವ ಭಿನ್ನಾಭಿಪ್ರಾಯ ಮರೆತು ಒಗ್ಗೂಡಿದರೆ ಅನುಕೂಲವಾಗಲಿದೆ’ ಎಂದು ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಅಭಿಪ್ರಾಯಪಟ್ಟರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಚಿದಾನಂದಪ್ಪ, ಮಾಜಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಎಂ. ಬಸವರಾಜ ನಾಯ್ಕ, ಎಸ್.ವಿ. ರಾಮಚಂದ್ರ, ಮುಖಂಡರಾದ ಬಿ.ಜಿ. ಅಜಯ್ಕುಮಾರ್, ರಾಜನಹಳ್ಳಿ ಶಿವಕುಮಾರ್, ದೇವರಮನೆ ಶಿವಕುಮಾರ್, ಲೋಕಿಕೆರೆ ನಾಗರಾಜ್, ‘ತುಮ್ಕೋಸ್’ ಅಧ್ಯಕ್ಷ ಶಿವಕುಮಾರ್ ಹಾಜರಿದ್ದರು.

ಒಳಪೆಟ್ಟು ಕೊಡಬೇಡಿ: ಶಿವಶಂಕರ್

‘ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ವರಿಷ್ಠರು ಅಳೆದು ತೂಗಿ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಪಕ್ಷದ ಅಭ್ಯರ್ಥಿಗೆ ಒಳಪೆಟ್ಟು ಕೊಡುವುದು ಬೇಡ. ಮುಖವಾಡ ಹಾಕಿಕೊಂಡು ಚುನಾವಣೆ ಮಾಡಬೇಡಿ’ ಎಂದು ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಚ್.ಎಸ್. ಶಿವಶಂಕರ್ ಸಲಹೆ ನೀಡಿದರು.

‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಲ್ಲಿ ಎರಡು ಗುಂಪುಗಳಾದವು. ಇದರಿಂದ ಚುನಾವಣೆಯಲ್ಲಿ ತೊಂದರೆ ಅನುಭವಿಸಬೇಕಾಯಿತು. ಎಲ್ಲವನ್ನು ಮರೆತು ಒಂದಾಗಿರುವುದು ಸಂತಸ ಮೂಡಿಸಿದೆ’ ಎಂದರು.

ಮುಸ್ಲಿಮರು ಬಿಜೆಪಿ ಬೆಂಬಲಿಸುವ ಸಾಧ್ಯತೆ ಇದೆ. ಇಂತಹ ಅವಕಾಶ ಮತ್ತೊಮ್ಮೆ ಸಿಗುವುದಿಲ್ಲ. ಅಪಸ್ವರ, ಭಿನ್ನಾಭಿಪ್ರಾಯ ಬದಿಗೊತ್ತಿ ಕೆಲಸ ಮಾಡೋಣ.
–ಯಶವಂತರಾವ್ ಜಾಧವ್, ಬಿಜೆಪಿ ಮುಖಂಡ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಗರಣಗಳನ್ನು ವಿಧಾನಮಂಡಲದ ಅಧಿವೇಶನದಲ್ಲಿ ಪ್ರಶ್ನಿಸುವೆ. ಈ ಹಗರಣಗಳು ಉಪಚುನಾವಣೆಯ ವಸ್ತುವಾಗಬೇಕು.
–ಬಿ.ಪಿ.ಹರೀಶ್, ಶಾಸಕ, ಹರಿಹರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.