ಸೋಮವಾರ, ಆಗಸ್ಟ್ 2, 2021
20 °C

ಸೋಂಕಿತರನ್ನು ಹುರಿದುಂಬಿಸಲು ಹೆಜ್ಜೆ ಹಾಕಿದ ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ದಾವಣಗೆರೆ: ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಕೊರೊನಾ ಸೋಂಕಿತರಿಗೆ ಸೋಮವಾರ ಸಂಜೆ ರಸಮಂಜರಿ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋಂಕಿತರಿಗೆ ಪುಳಕ ಉಂಟು ಮಾಡಿದರು. ರಾತ್ರಿ ಹಾಡಿಗೆ ನೃತ್ಯ ಮಾಡುವ ಮೂಲಕ ಹುರಿದುಂಬಿಸಿದರು.

ಸೋಂಕಿತರನ್ನು ಹುರಿದುಂಬಿಸಲು ಹೆಜ್ಜೆ ಹಾಕಿದ ರೇಣುಕಾಚಾರ್ಯ

ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಲು ಹೊನ್ನಾಳಿ ತಾಲ್ಲೂಕಿನ ಎಚ್.ಕಡದಕಟ್ಟೆ ಗ್ರಾಮದಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕೋವಿಡ್ ಕೇರ್ ಸೆಂಟರ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಯಿತು ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

‘ರಾಜಕುಮಾರ’ ಚಿತ್ರದ ಹಾಡು ಹೇಳುವ ಮೂಲಕ ಸರ್ಕಲ್‌ ಇನ್‌ಸ್ಪೆಕ್ಟರ್‌ ದೇವರಾಜ್ ರಂಜಿಸಿದರು. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸೋಂಕಿತರಿಂದ ಅಂತರ ಕಾಪಾಡಿಕೊಂಡು ಶಾಸಕರು ಹಾಕಿದ ಹೆಜ್ಜೆ ‌ಮನ ಸೆಳೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು