ಗುರುವಾರ , ಅಕ್ಟೋಬರ್ 28, 2021
18 °C
ಇಂದಿನಿಂದ ಬಿಜೆಪಿ ಸಭೆ; ಬೆಣ್ಣೆದೋಸೆ ನಗರಿ ಕೇಸರಿಮಯ

ದಾವಣಗೆರೆ: ಪಕ್ಷ ಬಲವರ್ಧನೆಗೆ ಬಿಜೆಪಿ ಸಜ್ಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ರಾಜ್ಯದ ಅಭಿವೃದ್ಧಿ ಹಾಗೂ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ಕಾರ್ಯಕಾರಿಣಿ ಸೆ.18 ಹಾಗೂ 19ರಂದು ನಗರದಲ್ಲಿ ನಡೆಯಲಿದೆ. ಬೆಣ್ಣೆದೋಸೆ ನಗರಿಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದ್ದು, ನಾಯಕರನ್ನು ಸ್ವಾಗತಿಸುವ ಫ್ಲೆಕ್ಸ್, ಬಂಟಿಂಗ್ಸ್ ಎಲ್ಲೆಡೆ ರಾರಾಜಿಸುತ್ತಿವೆ.

ನಗರದ ಪ್ರಮುಖ ವೃತ್ತಗಳು ಹಾಗೂ ಖಾಸಗಿ ಕಟ್ಟಡಗಳು ಸೇರಿ 20 ಸ್ಥಳಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ.

‘ಸೆ.18ರಂದು ಸಂಜೆ 6.30ಕ್ಕೆ ಅಪೂರ್ವ ರೆಸಾರ್ಟ್‌ನಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಸೆ.19ರ ಬೆಳಿಗ್ಗೆ 10ಕ್ಕೆ ತ್ರಿಶೂಲ್‌ ಕಲಾಭವನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯ ಕಾರ್ಯಕಾರಿಣಿಗೆ ಚಾಲನೆ ನೀಡಲಾಗುವುದು. 574 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಮಾಹಿತಿ ನೀಡಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ರಾಜೀವ್ ಚಂದ್ರಶೇಖರ್, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ರಾಜ್ಯದ ಸಚಿವರು, ಶಾಸಕರು ಕಾರ್ಯಕಾರಣಿಯಲ್ಲಿ ಪಾಲ್ಗೊಳ್ಳುವರು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು