ಐವಾನ್ ಡಿಸೋಜಾ ಹಾಗೂ ಜಮೀರ್ ಅಹಮ್ಮದ್ ಅವರ ವರ್ತನೆ ಭಯೋತ್ಪಾದಕರ ರೀತಿಯಲ್ಲಿದೆ. ಇವರ ವಿರುದ್ಧ ಭಯೋತ್ಪಾದನಾ ನಿಗ್ರಹ ದಳಕ್ಕೆ ದೂರು ಕೊಡಲು ನಿರ್ಧರಿಸಿದ್ದೇವೆ. ದೇಶದ್ರೋಹಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ.
–ಎನ್.ರಾಜಶೇಖರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಕಾಂಗ್ರೆಸ್ ನಾಯಕರು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲರನ್ನು ಅವಹೇಳನ ಮಾಡಿದವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ ದೇಶದ್ರೋಹ ಎಸಗಿದ ಕಾಂಗ್ರೆಸ್ ಸರ್ಕಾರ ಶೀರ್ಘದಲ್ಲೇ ಪತನ ಆಗಲಿದೆ.