ದಾವಣಗೆರೆ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ‘ಮಹಾಸಂಗಮ’ ಸಮಾರೋಪ ಮಾರ್ಚ್ 25ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಭಿಕರ ನಡುವೆ ಪೆಂಡಾಲ್ ಒಳಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಂಸದ ಜಿ.ಎಂ.ಸಿದ್ದೇಶ್ವರ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
‘ರಾಜ್ಯದ ವಿವಿಧೆಡೆ ರೋಡ್ ಶೋ ನಡೆದಿದೆ. ದಾವಣಗೆರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಿಕರ ನಡುವೆ ಹಾದು ಹೋಗಬೇಕು ಎಂದು ಪ್ರಧಾನಿಯವರೇ ಆಶಯ ವ್ಯಕ್ತಪಡಿಸಿದ್ದು, ಇದೇ ಮೊದಲ ಬಾರಿಗೆ ಪೆಂಡಾಲ್ ಒಳಗೆ ತೆರೆದ ವಾಹನದಲ್ಲಿ ಕೈಬೀಸುತ್ತ ವೇದಿಕೆಯತ್ತ ತೆರಳಲಿದ್ದಾರೆ’ ಎಂದು ಮಾಹಿತಿ ನೀಡಿದರು.
‘ಮಿಷನ್–150’ ಗುರಿಯೊಂದಿಗೆ ಬಿಜೆಪಿ ಮಾರ್ಚ್ 1ರಿಂದ ನಾಲ್ಕು ಕಡೆಗಳಿಂದ ಆರಂಬಿಸಿದ್ದ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯುತ್ತಿದೆ. 10 ಲಕ್ಷ ಜನ ಭಾಗವಹಿಸುವ
ನಿರೀಕ್ಷೆ ಇದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ, ಅಲ್ಲಿಂದ ಹೆಲಿಕಾಫ್ಟರ್‌ನಲ್ಲಿ ಮಧ್ಯಾಹ್ನ 3ಕ್ಕೆ ದಾವಣಗೆರೆ ತಲುಪುವರು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.