ಹೊನ್ನಾಳಿ: ‘2028ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನಮ್ಮ ಕಾರ್ಯಕರ್ತರು ಮಾಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಲಹೆ ನೀಡಿದರು.

ಶನಿವಾರ ಪಟ್ಟಣದ ಮೋಹನ್ ಎನ್ಕ್ಲೈವ್ ಸಭಾಂಗಣದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ಸಾಮಾಜಿಕ ಜಾಲತಾಣ ಕಾರ್ಯಾಗಾರವನ್ನು ಶಿವಮೊಗ್ಗ ವಿಭಾಗದ ಸಾಮಾಜಿಕ ಜಾಲತಾಣದ ಸಂಪನ್ಮೂಲ ವ್ಯಕ್ತಿ ಪಂಡಿತ್ ಪ್ರಶಾಂತ್ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಕಾಲ ಕಾಲಕ್ಕೆ ಪ್ರಚಾರ ಮಾಧ್ಯಮಗಳು ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನಾವೂ ಕೂಡಾ ಬದಲಾಗಬೇಕಾಗಿದೆ, ಇದೀಗ ಸಾಮಾಜಿಕ ಮಾಧ್ಯಮ, ಕೃತಕ ಬುದ್ಧಿ ಮತ್ತೆ (ಎ.ಐ) ನಮೋ ಮತ್ತು ಸರಳ ಆ್ಯಪ್ಗಳ ಮೂಲಕ ಪ್ರತಿಯೊಬ್ಬರನ್ನು ತಲುಪಬೇಕಾಗಿದೆ ಎಂದು ಹೇಳಿದರು.

‘ದೇಶದಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಸುಳ್ಳು ಮತದಾರರನ್ನು ತೆಗೆದುಹಾಕುವ ಮೂಲಕ ನಿಜವಾದ ಮತದಾರರನ್ನು ಉಳಿಸುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಸುಳ್ಳು ಮತದಾರರನ್ನು ಗುರುತಿಸಿ ತೆಗೆದು ಹಾಕಿಸುವ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಅವಳಿ ತಾಲ್ಲೂಕುಗಳಲ್ಲಿ ನಡೆಯುವ ವಿಎಸ್ಎಸ್ಎನ್ ಸೇರಿದಂತೆ ಅನೇಕ ಸ್ಥಳೀಯ ಚುನಾವಣೆಗಳತ್ತ ಗಮನಹರಿಸಬೇಕು, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಬೇಕು, ತಳಮಟ್ಟದಲ್ಲಿ ಅಧಿಕಾರ ಹಿಡಿದರೆ ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಕಷ್ಟವಾಗುವುದಿಲ್ಲ’ ಎಂದರು.

‘ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಷಯಗಳನ್ನು ಹಾಕದೇ ಪಕ್ಷದ ಸಾಧನೆಗಳನ್ನು ಮಾತ್ರ ಹಾಕುವ ಮೂಲಕ ಜನಮನ್ನಣೆ ಗಳಿಸಬೇಕು’ ಎಂದರು.

‘ಮೇ 31ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಕಾರ್ಯಕರ್ತರು ತಪ್ಪದೇ ವೀಕ್ಷಿಸಬೇಕು’ ಎಂದು ಮನವಿ ಮಾಡಿದರು.

ಕಾರ್ಯಾಗಾರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ. ಕುಬೇಂದ್ರಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಎಸ್.ಎಸ್. ಬೀರಪ್ಪ, ಮಾದೇನಹಳ್ಳಿ ನಾಗರಾಜ್, ರಂಗನಾಥ್, ಮಾರುತಿನಾಯ್ಕ, ಶಿವಾನಂದ್, ನೆಲಹೊನ್ನೆ ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-43-2047266939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.