ಶುಕ್ರವಾರ, ಆಗಸ್ಟ್ 19, 2022
27 °C

ಬಿಜೆಪಿಯ ಅಧಿಕಾರ ದಾಹದಿಂದ ಕೋಲಾಹಲ: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ವಿಧಾನ ಪರಿಷತ್‍ನಲ್ಲಿ ಇತ್ತಿಚೆಗೆ ನಡೆದ ಗಲಾಟೆ, ಗದ್ದಲ, ಕೋಲಾಹಲಕ್ಕೆ ಬಿಜೆಪಿಯ ಅಧಿಕಾರ ದಾಹವೇ ಕಾರಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ವಕ್ತಾರ ಡಿ. ಬಸವರಾಜ್ ಆರೋಪಿಸಿದ್ದಾರೆ.

ವಿಧಾನ ಪರಿಷತ್‍ನಲ್ಲಿ ನಡೆದ ಘಟನೆ ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಚುಕ್ಕೆ. ಅಂದಿನ ಕಲಾಪದ ಬೆಲ್ ಆಗುತ್ತಿರುವಾಗ, ಸಭಾಪತಿ ಪೀಠಕ್ಕೆ ಬಾರದಂತೆ ತಡೆಯಲು ಬಾಗಿಲಿಗೆ ಬೀಗ ಹಾಕಿದ ಬಿಜೆಪಿಯು ಸಭಾಪತಿಯವರ ಅನುಮತಿ ಇಲ್ಲದೆ ಉಪಸಭಾಪತಿಯನ್ನು ಪೀಠದ ಮೇಲೆ ಕೂರಿಸಿ ಕಲಾಪ ನಡೆಸಲು ಹೊರಟಿರುವುದೇ ಕೋಲಾಹಲಕ್ಕೆ ಕಾರಣವಾಯಿತು. ಬಿಜೆಪಿ ಸದಸ್ಯರು ಹಾಡುಹಗಲೇ ಸಂವಿಧಾನಕ್ಕೆ ಅಪಚಾರವೆಸಗಿದರೂ  ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಸಚಿವರು ಆ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ಟೀಕಿಸಿದ್ದಾರೆ.

ಸಂವಿಧಾನ ವಿರೋಧಿ ಗೋ ಹತ್ಯೆ ನಿಷೇಧ ಹಾಗೂ ಲವ್‍ಜಿಹಾದ್ ಮಸೂದೆಗಳನ್ನು ಅಂಗೀಕರಿಸಲು ಮೇಲ್ಮನೆಯಲ್ಲಿ ಸ್ಪಷ್ಟ ಬಹುಮತವಿಲ್ಲದ ಕಾರಣ ಈ ರೀತಿ ಅಡ್ಡ ದಾರಿ ಹಿಡಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು