ಗುರುವಾರ , ಮೇ 19, 2022
21 °C

ಜಿಲ್ಲೆಯಲ್ಲಿ 10 ಮಂದಿಯಲ್ಲಿ ಪತ್ತೆಯಾದ ಕಪ್ಪು ಶಿಲೀಂಧ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಪತ್ತೆಯಾಗಿದೆ. ಇಲ್ಲಿವರೆಗೆ ಒಟ್ಟು 79 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಕಾಣಿಸಿಕೊಂಡಿದ್ದು, ಅದರಲ್ಲಿ 19 ಮಂದಿ ಗುಣಮುಖರಾಗಿದ್ದಾರೆ.

ಇಲ್ಲಿವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 51 ಪ್ರಕರಣ ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿದ್ದಾ‌ರೆ. ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯಲ್ಲಿ 25 ಮಂದಿಯಲ್ಲಿ ಶಿಲೀಂಧ್ರ ಕಾಣಿಸಿಕೊಂಡಿದ್ದು, 6 ಮಂದಿ ಗುಣಮುಖರಾಗಿದ್ದಾರೆ. ಬಾಪೂಜಿ ಆಸ್ಪತ್ರೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಬಿಡುಗಡೆಗೊಂಡಿದ್ದಾರೆ. ಕಾಲೇಜ್‌ ಆಫ್ ಡೆಂಟಲ್‌ ಸೈನ್ಸ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ಕೊರೊನಾದಿಂದ 10 ಮಂದಿ ಸಾವು: ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿರುವುದು ಸೋಮವಾರ ದೃಢಪಟ್ಟಿದೆ.

ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣದ 42 ವರ್ಷದ ಪುರುಷ, ನಲ್ಲೂರಿನ 55 ವರ್ಷದ ಮಹಿಳೆ, ಸಿದ್ದನಮಠದ 68 ವರ್ಷದ ವೃದ್ಧ, ತೊಪ್ಪೇನಹಳ್ಳಿಯ 52 ವರ್ಷದ ಮಹಿಳೆ, ದಾವಣಗೆರೆ ಜಯನಗರದ 84 ವರ್ಷದ ವೃದ್ಧ, ಚೌಡೇಶ್ವರಿ ನಗರದ 45 ವರ್ಷದ ಮಹಿಳೆ, ಹರಿಹರ ತೆಗ್ಗಿನಕೆರೆಯ 59 ವರ್ಷದ ಪುರುಷ, ಹೊನ್ನಾಳಿ ಬಿದರಗುಡ್ಡೆಯ 52 ವರ್ಷದ ಮಹಿಳೆ ಮೃತಪಟ್ಟವರು.

ದಾವಣಗೆರೆ ತಾಲ್ಲೂಕಿನಲ್ಲಿ 109, ಹರಿಹರ ತಾಲ್ಲೂಕಿನಲ್ಲಿ 17, ಚನ್ನಗಿರಿ ತಾಲ್ಲೂಕಿನಲ್ಲಿ 36, ಹೊನ್ನಾಳಿ ತಾಲ್ಲೂಕಿನ 12, ಜಗಳೂರು ತಾಲ್ಲೂಕಿನಲ್ಲಿ 14 ಮಂದಿಗೆ ಕೊರೊನಾ ಬಂದಿದೆ. ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಗಳ 5 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು