ದಾವಣಗೆರೆ: ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಬ್ಬರಿಗೆ ಕಪ್ಪು ಶಿಲೀಂಧ್ರ ಇರುವುದು ಗುರುವಾರ ದೃಢಪಟ್ಟಿದೆ. ಐದು ಗುಣಮುಖರಾಗಿದ್ದಾರೆ. ಇಲ್ಲಿವರೆಗೆ ಒಟ್ಟು 97 ಮಂದಿಯಲ್ಲಿ ಕಪ್ಪು ಕಾಣಿಸಿಕೊಂಡಿದ್ದು, ಅದರಲ್ಲಿ ಒಟ್ಟು 54 ಮಂದಿ ಗುಣಮುಖರಾಗಿದ್ದಾರೆ.

ಇಲ್ಲಿವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 60 ಪ್ರಕರಣ ದೃಢಪಟ್ಟಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ 34 ಮಂದಿಯಲ್ಲಿ ಶಿಲೀಂಧ್ರ ಕಾಣಿಸಿಕೊಂಡಿದ್ದು, 19 ಮಂದಿ ಗುಣಮುಖರಾಗಿದ್ದಾರೆ. ಬಾಪೂಜಿ ಆಸ್ಪತ್ರೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಬಿಡುಗಡೆಗೊಂಡಿದ್ದಾರೆ. ಕಾಲೇಜ್ ಆಫ್ ಡೆಂಟಲ್ ಸೈನ್ಸ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದು, ಅವರು ಗುಣಮುಖರಾಗಿದ್ದಾರೆ.

ಕೊರೊನಾದಿಂದ 3 ಮಂದಿ ಸಾವು: ಜಿಲ್ಲೆಯಲ್ಲಿ ಕೊರೊನಾದಿಂದ ಮೂವರು ಮೃತಪಟ್ಟಿರುವುದು ಗುರುವಾರ ದೃಢಪಟ್ಟಿದೆ.

ಚನ್ನಗಿರಿ ತಾಲ್ಲೂಕಿನ ಕೆರೆಕಟ್ಟೆ ತಾಂಡಾದ 70 ವರ್ಷದ ವೃದ್ಧೆ, ದಾವಣಗೆರೆ ತಾಲ್ಲೂಕಿನ ಎಸ್‌ಕೆಎಸ್ ಬಡಾವಣೆಯ 71 ವರ್ಷದ ವೃದ್ಧ, ನಾಗರಕಟ್ಟೆಯ 51 ವರ್ಷದ ಮಹಿಳೆ ಮೃತಪಟ್ಟವರು.

ದಾವಣಗೆರೆ ತಾಲ್ಲೂಕಿನಲ್ಲಿ 64, ಹರಿಹರ ತಾಲ್ಲೂಕಿನಲ್ಲಿ 13, ಚನ್ನಗಿರಿ ತಾಲ್ಲೂಕಿನಲ್ಲಿ 19, ಹೊನ್ನಾಳಿ ತಾಲ್ಲೂಕಿನ 9, ಜಗಳೂರು ತಾಲ್ಲೂಕಿನಲ್ಲಿ 7 ಮಂದಿಗೆ ಕೊರೊನಾ ಬಂದಿದೆ. ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಗಳ 6 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.