ಸೋಮವಾರ, ಆಗಸ್ಟ್ 8, 2022
22 °C

ಮೂರು ಮಂದಿಗೆ ಕಪ್ಪು ಶಿಲೀಂಧ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಎಸ್‌ಎಸ್‌ ಹೈಟೆಕ್‌ ಆಸ್ಪತ್ರೆಯಲ್ಲಿ ಒಬ್ಬರಿಗೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರಿಗೆ ಕಪ್ಪು ಶಿಲೀಂಧ್ರ ಇರುವುದು ಗುರುವಾರ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 91 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಕಾಣಿಸಿಕೊಂಡಿದ್ದು, ಅದರಲ್ಲಿ 37 ಮಂದಿ ಗುಣಮುಖರಾಗಿದ್ದಾರೆ.

ಇಲ್ಲಿವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 54 ಪ್ರಕರಣ ದೃಢಪಟ್ಟಿದ್ದು, 23 ಮಂದಿ ಗುಣಮುಖರಾಗಿದ್ದಾ‌ರೆ. ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯಲ್ಲಿ 34 ಮಂದಿಯಲ್ಲಿ ಶಿಲೀಂಧ್ರ ಕಾಣಿಸಿಕೊಂಡಿದ್ದು, 13 ಮಂದಿ ಗುಣಮುಖರಾಗಿದ್ದಾರೆ. ಬಾಪೂಜಿ ಆಸ್ಪತ್ರೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಬಿಡುಗಡೆಗೊಂಡಿದ್ದಾರೆ. ಕಾಲೇಜ್‌ ಆಫ್ ಡೆಂಟಲ್‌ ಸೈನ್ಸ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ಕೊರೊನಾದಿಂದ 11 ಮಂದಿ ಸಾವು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 11 ಮಂದಿ ಮೃತಪಟ್ಟಿರುವುದು ಗುರುವಾರ ದೃಢಪಟ್ಟಿದೆ.

ದಾವಣಗೆರೆ ತಾಲ್ಲೂಕು ಬೆಳವನೂರಿನ 30 ವರ್ಷದ ಮಹಿಳೆ, ತೋಳಹುಣಸೆಯ 33 ವರ್ಷದ ಪುರುಷ, ದೇವರಾಜ ಅರಸು ಬಡಾವಣೆಯ 65 ವರ್ಷದ ವೃದ್ಧೆ, ಹರಿಹರ ತಾಲ್ಲೂಕಿನ ದೊಡ್ಡಿಬೀದಿಯ 80 ವರ್ಷದ ವೃದ್ಧೆ, ಹೊನ್ನಾಳಿ ತಾಲ್ಲೂಕಿನ ಬಲಮುರಿಯ 46 ವರ್ಷದ ಪುರುಷ, ಹಿರೇಮಠದ 70 ವರ್ಷದ ವೃದ್ಧ, ತುಂಗಭದ್ರಾ ಹೊಳೆಬದಿ ನಿವಾಸಿ 68 ವರ್ಷದ ವೃದ್ಧೆ, ಮಲ್ಲಿಗಟ್ಟೆಯ 55 ವರ್ಷದ ಮಹಿಳೆ, ಹಾವೇರಿ ಜಿಲ್ಲೆಯ ಹಿರೇಬೆರೂರಿನ 59 ವರ್ಷದ ಮಹಿಳೆ, ರಾಣೆಬೆನ್ನೂರು ತಾಲ್ಲೂಕಿನ ಕವಲೆತ್ತುವಿನ 55 ವರ್ಷದ ಪುರುಷ, 69 ವರ್ಷದ ವೃದ್ಧ ಮೃತಪಟ್ಟವರು.

ದಾವಣಗೆರೆ ತಾಲ್ಲೂಕಿನಲ್ಲಿ 94, ಹರಿಹರ ತಾಲ್ಲೂಕಿನಲ್ಲಿ 4, ಚನ್ನಗಿರಿ ತಾಲ್ಲೂಕಿನಲ್ಲಿ 32, ಹೊನ್ನಾಳಿ ತಾಲ್ಲೂಕಿನ 16, ಜಗಳೂರು ತಾಲ್ಲೂಕಿನಲ್ಲಿ 5 ಮಂದಿಗೆ ಕೊರೊನಾ ಬಂದಿದೆ. ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಗಳ 2 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು