ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅವಧಿಯ ಬಾಂಬ್‌ ಸ್ಫೋಟ ಪ್ರಕರಣಗಳನ್ನು ಜನರ ಮುಂದಿಡುವೆವು: ರಾಮಲಿಂಗಾ

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ
Published 10 ಮಾರ್ಚ್ 2024, 6:00 IST
Last Updated 10 ಮಾರ್ಚ್ 2024, 6:00 IST
ಅಕ್ಷರ ಗಾತ್ರ

ದಾವಣಗೆರೆ: ‘ಬಿಜೆಪಿಯವರು ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಚುನಾವಣಾ ವಿಷಯವನ್ನಾಗಿ ಬಳಸಿದ್ದೇ ಆದರೆ, ನಾವು ಕೂಡ ಅವರ ಕಾಲಾವಧಿಯಲ್ಲಿ ನಡೆದ 6 ಬಾಂಬ್‌ ಸ್ಫೋಟ ಪ್ರಕರಣಗಳನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

‘ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಸರಣಿ ಬಾಂಬ್‌ ಸ್ಫೋಟವೂ ಸಂಭವಿಸಿತ್ತು. ಈ ವಿಚಾರಗಳನ್ನು ನಾವೂ ಜನರ ಮುಂದಿಡುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು. 

‘ಪ್ರಪಂಚ ಇರೋವರೆಗೂ ಅಪರಾಧ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಬಿಜೆಪಿ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾವು ಬಂದ ಮೇಲೆ ಸುಧಾರಣೆಯಾಗಿದೆ. ಬಿಜೆಪಿಯವರು ಒಂದು ವರ್ಷದ ಅವಧಿಗೆ ಸಬ್ ಇನ್‌ಸ್ಪೆಕ್ಟರ್, ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡುತ್ತಿದ್ದರು. ನಾವು ಎರಡು ವರ್ಷಗಳಿಗೊಮ್ಮೆ ಮಾಡುತ್ತೇವೆ’ ಎಂದರು.

‘ಲೋಕಸಭೆ ಚುನಾವಣೆಗೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಜಾಸ್ತಿ ಇರುವುದರಿಂದ ಕಗ್ಗಂಟಾಗಿದ್ದು, ಕಾಂಗ್ರೆಸ್‌ ಎರಡನೇ ಪಟ್ಟಿ ಮಾರ್ಚ್ 11ರ ನಂತರ ಬಿಡುಗಡೆಯಾಗಲಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತವಿಲ್ಲ. ದಾವಣಗೆರೆಯಲ್ಲಿ ಯಜಮಾನರು (ಎಸ್‌.ಎಸ್.ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಿವಶಂಕರಪ್ಪ) ಯಾರಿಗೆ ಹೇಳುತ್ತಾರೆ ಅವರಿಗೆ ಟಿಕೆಟ್ ಸಿಗುತ್ತದೆ’ ಎಂದರು.

10 ವರ್ಷಗಳು ನಮ್ಮ ಸರ್ಕಾರ ಇರುತ್ತದೆ. ಅಲ್ಲಿಯವರೆಗೂ ಗ್ಯಾರಂಟಿ ಮುಂದುವರೆಯುತ್ತದೆ. ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಏಕೆಂದರೆ ಅವರು ಉದ್ದಿಮೆಗಳ ಪರ ಅಲ್ವಾ ಅದಕ್ಕೆ’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT