ದಾವಣಗೆರೆ: ಮೈಮೇಲೆ ಸಾಂಬಾರ್ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ 4 ವರ್ಷದ ಬಾಲಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.

ಜಗಳೂರು ಗೊಲ್ಲರಹಟ್ಟಿಯ ಶ್ರೀನಿವಾಸ್ ಎಂಬುವರ ಪುತ್ರ ಮಿಥುನ್ (4) ಮೃತ ಬಾಲಕ. ಸೆ.15ರಂದು ಘಟನೆ ನಡೆದಿದ್ದು, ಸೆ.26ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಜಗಳೂರು ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಡುಗೆ ಮನೆಯ ಕಟ್ಟೆಯ ಮೇಲೆ ಇಟ್ಟಿದ್ದ ಸಾಂಬಾರ್ ಪಾತ್ರೆಯನ್ನು ಬಾಲಕ ಎಳೆದಿದ್ದಾನೆ. ಈ ವೇಳೆ ಬಿಸಿ ಸಾಂಬಾರ್ ಬಿದ್ದು, ಎದೆ ಭಾಗ, ದೇಹ ಹಾಗೂ ಕಾಲುಗಳು ಸುಟ್ಟಿದ್ದವು. ತೀವ್ರವಾಗಿ ಗಾಯಗೊಂಡಿದ್ದ ಬಾಲಕನಿಗೆ ಜಗಳೂರು, ದಾವಣಗೆರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.