ದಾವಣಗೆರೆ: ‘ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿಯತ್ತುವ ಹಾಗೂ ನ್ಯಾಯ ಕೇಳುವ ಶಾಸಕರ ಕುರಿತು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ಭಯವಿದೆ. ಹೀಗಾಗಿ, ನನ್ನ ಫೋನ್ ಕರೆಗಳನ್ನು ಅವರು ನಿರ್ಬಂಧಿಸಿದ್ದಾರೆ (ಬ್ಲಾಕ್ ಲೀಸ್ಟ್ಗೆ ಹಾಕಿದ್ದಾರೆ) ಎಂದು ಹರಿಹರದ ಶಾಸಕ ಬಿ.ಪಿ. ಹರೀಶ್ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಪಾಲನೆ ಆಗದಿರುವ ಕುರಿತು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಈ ಪ್ರವೃತ್ತಿ ಮುಂದುವರಿದರೆ ಜಿಲ್ಲಾಡಳಿತದ ವಿರುದ್ಧ ಹೋರಾಟ ಕೈಗೆತ್ತಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಸಾರ್ವಜನಿಕರ ಹಿತದೃಷ್ಟಿಯಿಂದ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಸಂಪರ್ಕಿಸಬೇಕಾಗುತ್ತದೆ. ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ದೂರವಾಣಿ ಕರೆಗೆ ಲಭ್ಯವಾಗುವುದಿಲ್ಲ. ಯಾವುದಕ್ಕೂ ಅವರು ಸ್ಪಂದಿಸುತ್ತಿಲ್ಲ. ಅವರು ಒಂದು ಮನೆತನದ ಸೇವೆಗೆ ಸೀಮಿತವಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ. ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದೇ ಇದ್ದರೆ ಮರಳಿ ಕರೆ ಮಾಡುವಂತೆ ಈ ಅದೇಶದಲ್ಲಿ ಸೂಚಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾಧಿಕಾರಿ ಶ್ರಮಿಸಬೇಕೆ ಹೊರತು ಒಂದು ಮನೆತನಕ್ಕೆ ಸೇವೆ ಮಾಡುವುದಲ್ಲ’ ಎಂದು ಕಿಡಿಕಾರಿದ್ದಾರೆ.

‘ಜಿಲ್ಲೆಯಲ್ಲಿ ಸರ್ಕಾರಿ ಕಾರ್ಯಕ್ರಮ, ಸಭೆಗಳು ಸಕಾಲಕ್ಕೆ ನಡೆಯುತ್ತಿಲ್ಲ. ಸರಿಯಾದ ಸಮಯಕ್ಕೆ ಹಾಜರಾಗುವ ಶಾಸಕರ ಬಗ್ಗೆ ಜಿಲ್ಲಾಡಳಿತಕ್ಕೆ ಗೌರವ ಕೂಡ ಇಲ್ಲ. ಸಭೆ, ಸಮಾರಂಭಗಳಿಗೆ ಜಿಲ್ಲಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಡವಾಗಿ ಆಗಮಿಸಿದರೆ ಸಹಿಸಿಕೊಳ್ಳೋಣ. ಆದರೆ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೂ ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸ. ರಾಜ್ಯ ಸರ್ಕಾರದ ಕಾರ್ಯಕ್ರಮಕ್ಕೂ ಸಂಸದರಿಗೂ ಏನು ಸಂಬಂಧ’ ಎಂದು ಪ್ರಶ್ನಿಸಿದ್ದಾರೆ.

‘ಹರೀಶ್ ಆರೋಪ ಹೊಸದಲ್ಲ’

‘ಹರಿಹರ ಶಾಸಕ ಬಿ.ಪಿ. ಹರೀಶ್ ಮಾಡಿದ ಆರೋಪ ಹೊಸದಲ್ಲ. ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೂಚನೆಯ ಮೇರೆಗೆ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು. ‘ದೂರವಾಣಿ ಕರೆ ಸ್ವೀಕರಿಸದೇ ಇರುವುದಕ್ಕೆ ಸಂಬಂಧಿಸಿದಂತೆ ಶಾಸಕರು ಮಾಡಿರುವ ಆರೋಪಗಳ ಕುರಿತು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರೊಂದಿಗೆ ಚರ್ಚಿಸಿದೆ. ಸಭೆ ಸಮಾರಂಭ ಸೇರಿದಂತೆ ಅನಿವಾರ್ಯ ಸಂದರ್ಭಗಳಲ್ಲಿ ಕರೆ ಸ್ವೀಕರಿಸಲು ಜಿಲ್ಲಾಧಿಕಾರಿಗೆ ಸಾಧ್ಯವಾಗದೇ ಇರಬಹುದು. ಇದಕ್ಕೆ ಶಾಸಕರು ಈ ರೀತಿಯ ಆರೋಪ ಮಾಡುವುದು ಸರಿಯಲ್ಲ’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ದೂರವಾಣಿ ಕರೆಗಳಿಗೆ ದಿನದ 24 ಗಂಟೆಯೂ ಸ್ಪಂದಿಸುತ್ತೇನೆ. ಯಾರೊಬ್ಬರ ಫೋನ್ ನಂಬರ್ ಕರೆ ನಿರ್ಬಂಧಿಸಿಲ್ಲ. ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸುವುದಿಲ್ಲ
-ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.