ದಾವಣಗೆರೆ: ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಶ್ವಾನಕ್ಕೆ ಹೋಲಿಸಿ ನಿಂದಿಸಿದ ಹರಿಹರ ಶಾಸಕ ಬಿ.ಪಿ. ಹರೀಶ್ ಏನು ಡಾಬರ್ಮನ್ ನಾಯಿಯೇ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಶ್ನಿಸಿದರು.

‘ಶಾಸಕರಾದವರು ಸ್ಥಾನದ ಘನತೆ, ಗೌರವ ಅರಿತು ನಡೆದುಕೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಯ ವಿರುದ್ಧ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಬೇಕು. ರೀತಿ–ನೀತಿ ಬಿಟ್ಟು ಮಾತನಾಡಬಾರದು’ ಎಂದು ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಸಮಾಜದಲ್ಲಿ ಶಾಂತಿ ನೆಲೆಸುವುದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ. ದಾದಾಗಿರಿ ಮಾಡುವುದು, ಉತ್ತಮ ಅಧಿಕಾರಿಗಳ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಅವರಿಗೆ ರೂಢಿಯಾಗಿದೆ. ಇಂತಹವರನ್ನು ಶಾಸಕರಾಗಿ ಸ್ವೀಕರಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಕೀಳು ಮಟ್ಟದ ರಾಜಕಾರಣ ಬಿಟ್ಟು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.