ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆಯಿಂದ ಕುಸಿದುಬಿದ್ದ ಸೇತುವೆ

Last Updated 6 ಮೇ 2022, 5:31 IST
ಅಕ್ಷರ ಗಾತ್ರ

ಬಸವಾಪಟ್ಟಣ: ಸಮೀಪದ ಕಣಿವೆಬಿಳಚಿಯ ಗಡ್ಡದ ಪಕ್ಕದಲ್ಲಿ ಭದ್ರಾ ನಾಲೆಗೆ ನಿರ್ಮಿಸಲಾಗಿದ್ದ ಸೇತುವೆ ಗುರುವಾರ ನಸುಕಿನಲ್ಲಿ ಭಾರಿ ಮಳೆಯಿಂದ ಕುಸಿದು ಬಿದ್ದಿದೆ.

60 ವರ್ಷಗಳ ಹಿಂದೆ ಕಟ್ಟಲಾಗಿರುವ ಈ ಸೇತುವೆ ಜೀರ್ಣಗೊಂಡಿತ್ತು. ಸೇತುವೆಯ ಮೇಲ್ಭಾಗದ ಗುಡ್ಡದ ಅಂಚಿನಲ್ಲಿ ಸುಮಾರು 120 ಮನೆಗಳಿದ್ದು, ಅಲ್ಲಿ ಸುಮಾರು 300ಕ್ಕೂ ಹೆಚ್ಚು ಜನ ವಾಸವಾಗಿದ್ದಾರೆ. ಸೇತುವೆ ಕುಸಿತದಿಂದ ಅಲ್ಲಿಯ ಜನರು, ದೈನಂದಿನ ಕೆಲಸಕಾರ್ಯ, ವ್ಯಾಪಾರ ವ್ಯವಹಾರ, ಕೃಷಿ ಮುಂತಾದ ಚಟುವಟಿಕೆಗಳಿಗೆ ಹೋಗಲು ಆಗುತ್ತಿಲ್ಲ. ಅಲ್ಲದೇ ಈ ಮನೆಗಳ ಸಮೀಪದಲ್ಲಿಯೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಲೂ ಸಹ ಕಣಿವೆಬಿಳಚಿ ಮತ್ತು ಸುತ್ತಲಿನ ರೋಗಿಗಳಿಗೂ ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ತೊಂದರೆಯಾಗಿದೆ. ಜಿಲ್ಲಾಡಳಿತ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಒಂದು ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಂಜಿನಪ್ಪ, ಸದಸ್ಯರಾದ ಎಸ್‌.ಅಣ್ಣೋಜಿರಾವ್‌, ಆಶಾಬಾಯಿ, ವಿಷ್ಣುಮೂರ್ತಿ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ನೀರಾವರಿ ಇಲಾಖೆಯ ಎ.ಇ.ಇ. ಧನಂಜಯ ನಾಯ್ಕ ಭೇಟಿ ನೀಡಿದ್ದು ಈ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೇಜಸ್ವಿ ಪಟೇಲ್‌ ಭೇಟಿ ನೀಡಿ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ಕೂಡಲೇ ಸರ್ಕಾರ ಇದಕ್ಕೆ ಸೂಕ್ತ ಪರಿಹಾರಕಾರ್ಯ ಕೈಗೊಳ್ಳಬೇಕು ಎಂದು ಅಲ್ಲಿಯ ನಿವಾಸಿಗಳು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT