ಹರಿಹರ: ‘ತಾಲ್ಲೂಕಿನಲ್ಲಿ ಅಭಿವೃದ್ಧಿ ಕೆಲಸ, ಕಾರ್ಯಗಳನ್ನು ಕೈಗೊಳ್ಳಲು ಅನುದಾನದ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಲು ತಾಲ್ಲೂಕಿನ ರಾಜನಹಳ್ಳಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರಿಗೆ ನೀಡಿದ ಮನವಿಯಲ್ಲಿ, ಕ್ಷೇತ್ರದ ಶಾಸಕರು ಬಿಜೆಪಿಯವರಾಗಿದ್ದು ಕಾಂಗ್ರೆಸ್ನವರಾದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರೊಂದಿಗೆ ಹೊಂದಾಣಿಕೆ ಆಗುತ್ತಿಲ್ಲ. ಶಾಸಕ, ಸಚಿವ, ಸಂಸದರ ನಡುವಿನ ಸಂಘರ್ಷದಿಂದ ತಾಲ್ಲೂಕಿನ ಅಭಿವೃದ್ಧಿಗೆ ದೊಡ್ಡ ಪೆಟ್ಟು ಬಿದ್ದಿದೆ’ ಎಂದು ಹೇಳಿದ್ದಾರೆ.

‘ಈವರೆಗೆ ಆಶ್ರಯ ಸಮಿತಿಯ ಸಭೆ ನಡೆಯದೆ ಆಶ್ರಯ ಕಾಲೊನಿ, ಬೀಡಿ ಕಾರ್ಮಿಕರ ಕಾಲೊನಿಯ ನನೆಗುದಿಗೆ ಬಿದ್ದಿರುವ ನೂರಾರು ಮನೆಗಳ ನೊಂದಣಿ ಹಾಗೂ ಇತರೆ ಕೆಲಸಗಳು ನಡೆಯುತ್ತಿಲ್ಲ. ನಗರಸಭೆಗೆ ಸೇರಿದ ಜಮೀನಿದ್ದರೂ ನಿರ್ವಸತಿಕರಿಗೆ ಹಂಚಿಕೆ ಮಾಡುತ್ತಿಲ್ಲ’ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.