ದಾವಣಗೆರೆ: ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.

‘ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು ಮೂರು ದಿನಗಳ ಕಾಲಾವಕಾಶವಿದೆ. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದ ರೂಪುರೇಷ ಸಿದ್ಧವಾಗುತ್ತಿದೆ’ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸಂಬಂಧಿಸಿದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಕರಣವು ವಿಧಾನಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರ ವ್ಯಾಪ್ತಿಗೆ ಬರುತ್ತದೆ. ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವದಂತಿ ಹರಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.