ಗುರುವಾರ , ಮೇ 6, 2021
23 °C

ಹರಪನಹಳ್ಳಿ: ಸಾಲದ ಹೊರೆ- ಬಳಿಗನೂರಿನಲ್ಲಿ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಪನಹಳ್ಳಿ: ತಾಲ್ಲೂಕಿನ ಬಳಿಗನೂರು ಗ್ರಾಮದಲ್ಲಿ ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಡಿಕೊಂಡಿದ್ದಾರೆ.

ಎಸ್.ಎಲ್.ನಾರನಗೌಡ (48) ಆತ್ಮಹತ್ಯೆ ಮಾಡಿಕೊಂಡವರು. ಎರಡು ಎಕರೆ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಪ್ರಸಕ್ತ ಸಾಲಿನಲ್ಲಿ ಈರುಳ್ಳಿ ಮತ್ತು ಟೊಮೊಟೊ ಬೆಳೆ ಬೆಳೆದಿದ್ದರು. ವೈಜ್ಞಾನಿಕ ಬೆಲೆ ಸಿಗದೆ ನಷ್ಟ ಅನುಭವಿಸಿದ್ದರು. ಬೆಳೆ ಬೆಳೆಯಲು ಕೊಟ್ಟೂರಿನ ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ ₹1 ಲಕ್ಷ, ಕೈಗಡವಾಗಿ ₹2 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ಬೇಸತ್ತು ಸೋಮವಾರ ಬೆಳಿಗ್ಗೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರಿಗೆ ಪತ್ನಿ ಇಬ್ಬರು ಪುತ್ರರು ಇದ್ದಾರೆ. ಘಟನಾ ಸ್ಥಳಕ್ಕೆ ಚಿಗಟೇರಿ ಠಾಣೆ ಪಿಎಸ್ಐ ನಾಗರಾಜ ಮತ್ತು ಕಂದಾಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು