ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಬಸ್ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ

Published 20 ಜುಲೈ 2023, 5:30 IST
Last Updated 20 ಜುಲೈ 2023, 5:30 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ನಿಟುವಳ್ಳಿಯ 60 ಅಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. 

ಇಲ್ಲಿನ ಸರಸ್ವತಿ ನಗರದಿಂದ ಹೊಂಡಾ ಸರ್ಕಲ್‌ಗೆ ಹೋಗುತ್ತಿದ್ದ ಪ್ರಯಾಣಿಕರಿದ್ದ ನಗರ ಸಾರಿಗೆ ಬಸ್‌ ಎಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸ್ಥಳೀಯರು ಹಾಗೂ ಬಸ್ ಸಿಬ್ಬಂದಿಯು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಚಾಲಕ ಹಾಗೂ ನಿರ್ವಾಹಕರು ನೀರು ಹಾಕಿ ಬೆಂಕಿ ನಂದಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT