ಸೋಮವಾರ, ನವೆಂಬರ್ 23, 2020
22 °C

ಎರಡು ಬಸ್‌ಗಳ ನಡುವೆ ಡಿಕ್ಕಿ: 40 ಪ್ರಯಾಣಿಕರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ತಾಲ್ಲೂಕು ಜೋಳದಹಾಳ್ ಗ್ರಾಮದ ಬಳಿ ರಾಜ್ಯ ಹೆದ್ದಾರಿ 65ರಲ್ಲಿ ಖಾಸಗಿ ಬಸ್‌ಗಳೆರಡು ಬುಧವಾರ ಮುಖಾಮುಖಿ ಡಿಕ್ಕಿಯಾಗಿ 40 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಚನ್ನಗಿರಿಯಿಂದ ಭದ್ರಾವತಿ ಹಾಗೂ ಭದ್ರಾವತಿಯಿಂದ ಚನ್ನಗಿರಿಗೆ ಬರುತ್ತಿದ್ದ ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದವು. ಅದೃಷ್ಟವಶಾತ್ ಪ್ರಾಣಹಾನಿಯಾಗಿಲ್ಲ.

ಎರಡು ಬಸ್‌ಗಳ 40 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚನ್ನಗಿರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮನೆಗಳಿಗೆ ಕಳುಹಿಸಲಾಗಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ಪ್ರಶಾಂತ್ ಜಿ. ಮುನ್ನೋಳಿ, ಸಿಪಿಐ ಆರ್.ಆರ್. ಪಾಟೀಲ್ ಹಾಗೂ ಎಸ್ಐ ಜಗದೀಶ್ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲು ನೆರವಾದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.