ಬಸ್ ಡಿಕ್ಕಿ: ಬೈಕ್ ಸವಾರ ಸಾವು
ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ಬಳಿ ಪಿ.ಬಿ. ರೋಡ್‌ನಲ್ಲಿ ಸೋಮವಾರ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದರಿಂದ ಬೈಕ್ ಸವಾರ ಹಳೇ ಕುಂದವಾಡ ನಿವಾಸಿ ವೆಂಕಟೇಶ್ (34) ಮೃತಪಟ್ಟಿದ್ದಾರೆ.
ತರಗಾರ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಬಸ್‌ನಿಲ್ದಾಣ ಕಡೆಯಿಂದ ತನ್ನ ಬೈಕಲ್ಲಿ ಹೋಗುತ್ತಿದ್ದಾಗ ಹರಿಹರ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಸಿಜಿ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾರೆ. ಹಳೇ ಕುಂದವಾಡ ಶ್ರೀನಿವಾಸ ನೀಡಿದ ದೂರಿನಂತೆ ದಾವಣಗೆರೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬರಹ ಇಷ್ಟವಾಯಿತೆ?
0
0
0
0
0
0 comments
View All