ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರವೇಶ ಪತ್ರ ನೀಡದ ಶಾಲೆಗಳ ಮಾನ್ಯತೆ ರದ್ದು’

Last Updated 16 ಜುಲೈ 2021, 3:51 IST
ಅಕ್ಷರ ಗಾತ್ರ

ದಾವಣಗೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜುಲೈ 19 ಹಾಗೂ 22ರಂದು ನಡೆಯಲಿದೆ. ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣವೊಡ್ಡಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಂತಹ ಶಾಲೆಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದ್ದಾರೆ.

ಕೆಲವು ಅನುದಾನ ರಹಿತ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಶಾಲಾ ಶುಲ್ಕವನ್ನು ಪಾವತಿಸದೇ ಇರುವುದರಿಂದ ಪ್ರವೇಶ ಪತ್ರಗಳನ್ನು ನೀಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಇದು ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಉಲ್ಲಂಘನೆಯಾಗಿದೆ. ಹೀಗಾಗಿ ಅನುದಾನ ರಹಿತ ಶಾಲೆ ಹಾಗೂ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ನೀಡಿ ಪರೀಕ್ಷೆಗೆ ಹಾಜರಾಗುವಂತೆ ಮಾಡುವುದು ಆಯಾ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ಜವಾಬ್ದಾರಿ ಎಂದು ತಿಳಿಸಿದ್ದಾರೆ.

ಪ್ರವೇಶ ಪತ್ರಗಳಿಗೆ ಸಂಬಂಧಿಸಿದ ದೂರುಗಳಿಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರವೇಶ ಪತ್ರಕ್ಕೆ ಸಂಬಂಧಿಸಿದ ದೂರುಗಳಿಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ನೀಡಿದ್ದಾರೆ.

ಮೊಬೈಲ್ ಸಂಖ್ಯೆ: ಚನ್ನಗಿರಿ: 9480695170, ದಾವಣಗೆರೆ ಉತ್ತರ ವಲಯ: 9480695172, ದಾವಣಗೆರೆ ದಕ್ಷಿಣ ವಲಯ: 9480695171, ಹರಿಹರ: 9480695174, ಹೊನ್ನಾಳಿ: 9480695175, ಜಗಳೂರು: 9480695176.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT