ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ, ಯೋಗ್ಯತೆ ಇದ್ದವರು ಸಿ.ಎಂ ಆಗುತ್ತಾರೆ: ಬಿ.‌ಸಿ. ಪಾಟೀಲ

Last Updated 12 ಜೂನ್ 2022, 4:19 IST
ಅಕ್ಷರ ಗಾತ್ರ

ದಾವಣಗೆರೆ: ಯಾರಿಗೆ ಯೋಗ ಇದೆಯೋ ಅವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ಯೋಗದ ಜೊತೆಗೆ ಯೋಗ್ಯತೆಯೂ ಇರಬೇಕು ಎಂದು ಕೃಷಿ ಸಚಿವ ಬಿ.‌ಸಿ. ಪಾಟೀಲ ಹೇಳಿದರು.

ಬಿ.ವೈ. ವಿಜಯೇಂದ್ರ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆಯ ಕುರಿತು ನಲ್ಕುಂದ ಗ್ರಾಮದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಆಗಲು ಜನರ ಹಾಗೂ ಹೈಕಮಾಂಡ್ ಆಶೀರ್ವಾದ ಬೇಕು. ನಾಳೆ ರವಿ ಅಣ್ಣ (ಎಸ್‌.ಎ. ರವೀಂದ್ರನಾಥ್) ಅವರೂ ಮುಖ್ಯಮಂತ್ರಿ ಆಗಬಹುದು’ ಎಂದು ಹೇಳಿದರು.

‘ನೂಪುರ್ ಶರ್ಮಾ ಹೇಳಿಕೆ ನೀಡಿ 15 ದಿನಗಳಾಗಿವೆ. ಈಗ ಪ್ರತಿಭಟನೆ ಮಾಡುತ್ತಿದ್ದಾರೆ. ಯಾರೋ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ. ಈ ದೇಶದಲ್ಲಿ ಕಾನೂನಿದೆ, ಅಲ್ಲಿ ಪ್ರಶ್ನೆ ಮಾಡಬಹುದಿತ್ತು. ಪ್ರತಿಭಟನೆ ನಡೆಸಿ ಸಾರ್ವಜನಿಕ ಆಸ್ತಿ ನಷ್ಟ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

‘ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂವರು ಅಭ್ಯರ್ಥಿಗಳು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಸವರಾಜ ಬೊಮ್ಮಯಿ ಆಡಳಿತ ಕಾರಣ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ಇನ್ನೂ ಹೆಚ್ಚಿನ ಮಂದಿ ಬಿಜೆಪಿಗೆ ಬರುವವರಿದ್ದಾರೆ. ಈಗಲೇ ಹೇಳಿದರೆ ಅವರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT