ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಕಿಕೆರೆ: ಕಾರಿಗೆ ಲಾರಿ ಡಿಕ್ಕಿ; ಮಹಿಳೆ ಸಾವು

Published 17 ಜೂನ್ 2024, 16:06 IST
Last Updated 17 ಜೂನ್ 2024, 16:06 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿವೆ.

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕು ಶಿವನಿ ಗ್ರಾಮದ ವಿಶಾಲಾಕ್ಷಿ (75) ಮೃತ ಮಹಿಳೆ. ಮಹಿಳೆ ಸೇರಿ ಕುಟುಂಬದ ಆರು ಜನ ಚನ್ನಗಿರಿಯಿಂದ ಮಲ್ಲಾಡಿಹಳ್ಳಿ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಚಿತ್ರದುರ್ಗ ಕಡೆಯಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್ಲರೂ ತೀವ್ರವಾಗಿ ಗಾಯಗೊಂಡಿದ್ದಾರೆ.

ತೀವ್ರವಾಗಿ ಗಾಯಗೊಂಡ ವಿಶಾಲಾಕ್ಷಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಲ್ಲಿ ಕರಿಯಪ್ಪ ಸ್ವಾಮಿ, ಸುಮಾ, ಯಶೋದಾ, ನಿಹಾರಿಕಾ, ಹರಿಕೃಷ್ಣ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT