ಕಾರು ಡಿಕ್ಕಿ: ಪಾದಚಾರಿಗೆ ಗಾಯ, 3 ಕುರಿಗಳು ಸಾವು

ಹೊನ್ನಾಳಿ: ತಾಲ್ಲೂಕಿನ ಸೊರಟೂರು ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಕಾರು ಡಿಕ್ಕಿ ಹೊಡೆದು ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದು, ಮೂರು ಕುರಿಗಳು ಮೃತಪಟ್ಟಿವೆ. ಎರಡು ಹಸುಗಳು ಗಾಯಗೊಂಡಿವೆ.
ರೈತ ಶಾಂತವೀರಪ್ಪ ಶಿಕಾರಿಪುರ ಮುಖ್ಯರಸ್ತೆಯಲ್ಲಿ ಜಾನುವಾರು ಮೇಯಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ಶಿಕಾರಿಪುರದಿಂದ ಹೊನ್ನಾಳಿಗೆ ಬರುತ್ತಿದ್ದ ಇನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಶಾಂತವೀರಪ್ಪ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭಾನುವಾರ ಶಾಂತವೀರಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.