ಭಾನುವಾರ, ಆಗಸ್ಟ್ 1, 2021
20 °C

ಕಾರು ಡಿಕ್ಕಿ: ಬೈಕಲ್ಲಿದ್ದ ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ತಾಲ್ಲೂಕಿನ ರೊಪ್ಪದಹಟ್ಟಿ ಗ್ರಾಮದ ಕ್ರಾಸ್‌ ಬಳಿ ಬುಧವಾರ ರಾತ್ರಿ ಯಾವುದೋ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹಟ್ಟಿ ಗ್ರಾಮದ ಇದಾಯತ್‌ ವುಲ್ಲಾ (19), ರಂಗಪ್ಪ (44) ಮತ್ತು ಮಹಮ್ಮದ್‌ ಸೈಫುಲ್ಲಾ (47) ಮೃತಪಟ್ಟವರು. ಮೂವರೂ ಗಾರೆ ಕೆಲಸ ಮಾಡುವವರಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಅಜ್ಜಂಪುರ ವಿಠಲಪುರ ಗ್ರಾಮದಲ್ಲಿ ಕೆಲಸ ಮುಗಿಸಿ ಒಂದೇ ಬೈಕಲ್ಲಿ ಬೀರೂರು–ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದರು. ರೋಪದಹಟ್ಟಿ ಕ್ರಾಸ್‌ ಬಳಿ ಯಾವುದೋ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದಾಯತ್‌ ಮತ್ತು ರಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಮ್ಮದ್‌ ಸೈಫುಲ್ಲಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.