ಶುಕ್ರವಾರ, ಜೂನ್ 18, 2021
21 °C

ದಾವಣಗೆರೆಯಲ್ಲಿ ಟಿಪ್ಪರ್‌ಗೆ ಕಾರು ಡಿಕ್ಕಿ: ಹೊತ್ತಿ ಉರಿದ ವಾಹನಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ವಿದ್ಯಾನಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಟಿಪ್ಪರ್‌ ಲಾರಿಗೆ ಕಾರು ಡಿಕ್ಕಿಯಾಗಿದ್ದರಿಂದ ಬೆಂಕಿ ಹತ್ತಿಕೊಂಡು ಕಾರು ಉರಿದಿದೆ. ಲಾರಿಗೂ ಬೆಂಕಿ ತಗಲಿದೆ. ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ವಿದ್ಯಾನಗರದ ಬಳಿ ಹೆದ್ದಾರಿ ಜಂಕ್ಷನ್‌ನಲ್ಲಿ ಟಿಪ್ಪರ್‌ ಲಾರಿಯನ್ನು ತಿರುಗುಸುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಟಿಪ್ಪರ್‌ನ ಡೀಸೆಲ್‌ ಟ್ಯಾಂಕಿಗೆ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಸ್ಥಳೀಯರು ಕಾರಲ್ಲಿದ್ದ ಚಾಲಕನನ್ನು ಹೊರಗೆ ತೆಗೆದಿದ್ದಾರೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡಿದೆ. ಕಾರಲ್ಲೂ, ಲಾರಿಯಲ್ಲೂ ಚಾಲಕರು ಮಾತ್ರ ಇದ್ದರು.

ಅಗ್ನಿ ಶಾಮಕ ದಳ ಬಂದು ಬೆಂಕಿ ನಂದಿಸಿದೆ. ಉತ್ತರ ಸಂಚಾರ ಪೊಲೀಸರು ಸ್ಥಳದಲ್ಲಿದ್ದು, ವಾಹನ ಸಂಚಾರಕ್ಕೆ ತಡೆಯಾಗದಂತೆ ನೋಡಿಕೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು