ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಟ್ಟು ಭಸ್ಮವಾದ ಕಾರು

Published 19 ಮಾರ್ಚ್ 2024, 5:46 IST
Last Updated 19 ಮಾರ್ಚ್ 2024, 5:46 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಹದಡಿ ರಸ್ತೆಯ ವಿಶಾಲ್‌ ಮಾರ್ಟ್ ಎದುರು ಸೋಮವಾರ ಕಾರೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಕ್ಷಣಾರ್ಧದಲ್ಲೇ ಕಾರು ಧಗ ಧಗನೆ ಹೊತ್ತಿ ಉರಿದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಮೂಲದ ನಾಗಾನಾಯ್ಕ ಅವರ ಕಾರು ಅಗ್ನಿ ಅವಘಡಕ್ಕೆ ತುತ್ತಾಗಿದೆ.

ಪುತ್ರನ ದ್ವಿತೀಯ ಪಿಯುಸಿ ಪರೀಕ್ಷೆಯ ಸಲುವಾಗಿ ದಾವಣಗೆರೆಗೆ ಬಂದಿದ್ದ ನಾಗಾನಾಯ್ಕ ಅವರು, ಪರೀಕ್ಷೆ ಮುಗಿಯುವ ತನಕ ಬಟ್ಟೆ ಖರೀದಿಗಾಗಿ ವಿಶಾಲ್ ಮಾರ್ಟ್‌ಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ. ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಎಫ್‌.ಎ. (ಫೈರ್‌ ಆ್ಯಕ್ಸಿಡೆಂಟ್‌) ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT