ದಾವಣಗೆರೆ: ಸಂಸದ ತೇಜಸ್ವಿ ಸೂರ್ಯಗೆ ಬೆದರಿಕೆ ಹಾಕಿರುವ ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.

ತಪ್ಪು ಮಾಡಿದವರ ಹೆಸರು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ಅವರು, ‘ತೇಜಸ್ವಿ ಸೂರ್ಯ ಅವರಾಗಲಿ, ಬಿಜೆಪಿಯಾಗಲಿ ಅಲ್ಪಸಂಖ್ಯಾತ ವಿರೋಧಿ ಅಲ್ಲ’ ಎಂದು ಅಭಿಪ್ರಾಯಪಟ್ಟರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸುತ್ತಾರೆ. ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು? ಯಡಿಯೂರಪ್ಪ ಅವರಿಗೆ ಎರಡು ಬಾರಿ ಕೋವಿಡ್ ಬಂದರೂ ಎಲ್ಲರೊಡಗೂಡಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರು ಯಾಕೆ ರಾಜೀನಾಮೆ ನೀಡಬೇಕು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.