ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರ ಕಾಲೊನಿಗಳಲ್ಲಿ ಸಿಸಿ ರಸ್ತೆ

ಕೆರೆಬಿಳಚಿ: ವಿವಿಧ ಕಾಮಗಾರಿಗೆ ಭೂಮಿಪೂಜೆ
Last Updated 28 ಡಿಸೆಂಬರ್ 2018, 11:58 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ಅಲ್ಪಸಂಖ್ಯಾತ ವರ್ಗದವರು ಹೆಚ್ಚಾಗಿರುವ ಕಾಲೊನಿಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ₹ 7 ಕೋಟಿ ಅನುದಾನ ಬಿಡುಗಡೆಯಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ತಾಲ್ಲೂಕಿನ ಕೆರೆಬಿಳಚಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆಯಲ್ಲಿ ಶುಕ್ರವಾರ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಈ ವಸತಿ ಶಾಲೆಯಲ್ಲಿ ₹ 2.46 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ ಕೊಠಡಿಗಳನ್ನು ನಿರ್ಮಿಸಲಾಗುವುದು. ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಗುಣ ನಮ್ಮದು. ಅಲ್ಪಸಂಖ್ಯಾತರ ಅಭಿವೃದ್ಧಿಯ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ. ಚುನಾವಣೆ ಬೇರೆ, ಅಭಿವೃದ್ಧಿ ಬೇರೆ. ಈ ಹಿಂದೆ ನಾನು ಶಾಸಕನಾಗಿದ್ದ ಸಂದರ್ಭದಲ್ಲೂ ಅಲ್ಪಸಂಖ್ಯಾತರ ಮಸೀದಿ, ಖಬರ್‌ಸ್ತಾನ್‌ಗಳ ನಿರ್ಮಾಣಕ್ಕಾಗಿ ₹ 9 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ನೀಡಲಾಗಿತ್ತು. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಲಿವೆ’ ಎಂದು ಭರವಸೆ ನೀಡಿದರು.

ಪೋಷಕರು ಮಕ್ಕಳ ಮೇಲೆ ಹೆಚ್ಚಿನ ನಂಬಿಕೆಯನ್ನು ಇಟ್ಟುಕೊಂಡಿರುತ್ತಾರೆ. ಆ ನಂಬಿಕೆಯನ್ನು ಹುಸಿ ಮಾಡದಂತೆ ಮಕ್ಕಳು ಉತ್ತಮವಾಗಿ ಅಭ್ಯಾಸ ನಡೆಸುವ ಮೂಲಕ ತಮ್ಮ ಪೋಷಕರಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಂಶುಪಾಲ ವಿಜಯಕುಮಾರ್, ವಿಸ್ತರಣಾಧಿಕಾರಿ ಶ್ರೀಧರ್, ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ಕೌಸರ್ ರೇಷ್ಮ, ಜಿ.ಎ. ರುದ್ರೇಗೌಡ್ರು, ಕಲೀಮುಲ್ಲಾ, ಮಹಮದ್ ಸೈಫುಲ್ಲಾ, ಮನ್ಸೂರ್ ಬೇಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT