ದಾವಣಗೆರೆ: ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭಾ ಕೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬುಧವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮಸ್ಕಿ ಕ್ಷೇತ್ರದಲ್ಲಿ ಕಾರ್ಯಕರ್ತರು ಪರಿಶ್ರಮದಿಂದ ಕೆಲಸ ಮಾಡಿದ್ದಾರೆ. ಸಚಿವ ಶ್ರೀರಾಮುಲು, ರವಿಕುಮಾರ್ ಹಾಗೂ ನಾನು ಉಸ್ತುವಾರಿ ಹೊತ್ತಿದ್ದೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಆ ಕ್ಷೇತ್ರದ ಜನ ಕೈಬಿಡುವುದಿಲ್ಲ. ಎಲ್ಲ ನಾಯಕರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದ್ದೇವೆ’ ಎಂದು ತಿಳಿಸಿದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ, ಕಾರ್ಯಕರ್ತರ ಪಡೆ ಉತ್ತಮವಾಗಿದೆ. ಹಾಗಾಗಿ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ’ ಎಂದು ಹೇಳಿದರು.

‘ಸಿಡಿ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯುವುದೋ ನೋಡೋಣ. ಪ್ರಕರಣವನ್ನು ರಾಜ್ಯದ ಜನರೂ ಗಮನಿಸುತ್ತಿದ್ದಾರೆ. ಎಸ್ಐಟಿ ತನಿಖೆ ನಡೆಯುತ್ತಿದೆ. ಬೆಳಗಾವಿ ಉಪಚುನಾವಣೆ ಮೇಲೆ ಸಿಡಿ ಪ್ರಕರಣ ಯಾವುದೇ ಪರಿಣಾಮ ಬೀರುವುದಿಲ್ಲ. ದೊಡ್ಡ ಅಂತರದಿಂದ ಗೆಲ್ಲುತ್ತೇವೆ. ಯಾವುದೇ ಪ್ರಕರಣಗಳು ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ’ಎಂದರು.

ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ರಾಜ್ಯ, ಕೇಂದ್ರದ ನಾಯಕರು ಗಮನಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲ. ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ನನಗೆ ಉಪಾಧ್ಯಕ್ಷ ಸ್ಥಾನ ನೀಡಿದ್ದಾರೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕಾರ್ಯ ನಿರ್ವಹಿಸುತ್ತೇನೆ’ ಎಂದು ಉತ್ತರಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಅನಗವಾಡಿ, ವಾಗಿ ಸ್ವಾಮಿ ದೇವರಮನೆ ಶಿವಕುಮಾರ್, ಪ್ರಸನ್ನ ಕುಮಾರ್, ನರೇಂದ್ರ ನಾಗರಾಜ್ ಮುಖಂಡರಾದ ಪಿ.ಸಿ.ಶ್ರೀನಿವಾಸ್, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ ಇದ್ದರು.

ಸಿಡಿ ಪ್ರಕರಣದಿಂದ ಪಕ್ಷಕ್ಕೆ ಹಾನಿ ಇಲ್ಲ

ಸಿಡಿ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮತದಾರರು ಸೂಕ್ಷ್ಮವಾಗಿ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಈ ವಿಚಾರವಾಗಿ ವಿಧಾನಸಭೆಯಲ್ಲಿ ಒಂದು ದಿನ ಪೂರ್ತಿ ಚರ್ಚೆಯಾಗಿದೆ’ ಎಂದು ತಿಳಿಸಿದರು.

‘ಚುನಾವಣೆ ಬಂದಾಗ ಮಾತ್ರ ಪರ, ವಿರೋಧ ಕಾಣುತ್ತಿತ್ತು. ಉಳಿದ ಸಂದರ್ಭಗಳಲ್ಲಿ ಆಡಳಿತ, ಪ್ರತಿಪಕ್ಷಗಳು ಒಟ್ಟಾಗಿ ಹೋಗುತ್ತಿದ್ದವು. ಆದರೆ ಇತ್ತೀಚೆಗೆ ಈ ರೀತಿಯ ದ್ವೇಷದ ರಾಜಕಾರಣ ಹೆಚ್ಚಾಗುತ್ತಿದೆ. ವೈಯಕ್ತಿಕ ವಿಚಾರಗಳಲ್ಲೂ ಕೈಹಾಕುತ್ತಿದ್ದಾರೆ. ಜನ ಸೂಕ್ತ ಉತ್ತರ ನೀಡಲಿದ್ದಾರೆ. ಅನಗತ್ಯವಾಗಿ ತೇಜೋವಧೆ ಆಗಬಾರದು ಎಂಬ ಕಾರಣಕ್ಕೆ ಕೆಲವರು ಕಾನೂನು ಮೊರೆ ಹೋಗಿದ್ದಾರೆ. ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.