ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮದಡಿ ದಸರಾ, ಈದ್‌ ಮಿಲಾದ್ ಆಚರಿಸಿ

ನಾಗರಿಕ ಸೌಹಾರ್ದ ಸಮನ್ವಯ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ
Last Updated 12 ಅಕ್ಟೋಬರ್ 2021, 5:29 IST
ಅಕ್ಷರ ಗಾತ್ರ

ದಾವಣಗೆರೆ: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ದಸರಾ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಆಚರಣೆಗಾಗಿ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಿಕೊಂಡು, ಸೌಹಾರ್ದಯುತವಾಗಿ ಆಚರಿಸಬೇಕು. ಸಾಮೂಹಿಕ ಮೆರವಣಿಗೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ನಾಗರಿಕ ಸೌಹಾರ್ದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಆದೇಶಗಳಂತೆ ಹಬ್ಬಗಳನ್ನು ಸರಳವಾಗಿ ಆಚರಿಸಿ ಸಹಕರಿಸಿದ್ದರ ಫಲವಾಗಿ ಕೋವಿಡ್ ಸದ್ಯ ನಿಯಂತ್ರಣದಲ್ಲಿದೆ. ಆದರೂ ತಜ್ಞರ ಎಚ್ಚರಿಕೆ ಮೇರೆಗೆ ಮುಂಜಾಗ್ರತೆ ವಹಿಸುವುದು ಅನಿವಾರ್ಯ. ಈ ಬಾರಿಯ ದಸರಾ ಹಾಗೂ ಈದ್‍ಮಿಲಾದ್ ಹಬ್ಬದ ಸಂದರ್ಭದಲ್ಲಿ ಸರ್ಕಾರ ಕೆಲವೊಂದು ನಿರ್ಬಂಧಗಳನ್ನು ಹಾಕಿದೆ. ಈ ನಿರ್ಬಂಧ ಸಡಿಲಿಸಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಿಲ್ಲ. ಆದರೆ ಅಗತ್ಯಬಿದ್ದರೆ ಇನ್ನಷ್ಟು
ನಿರ್ಬಂಧ ವಿಧಿಸಲು ಅವಕಾಶ ನೀಡಿದೆ ಎಂದು ಅವರು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿ
ಕಾರಿ ಸಿ.ಬಿ. ರಿಷ್ಯಂತ್, ‘ವಿಜೃಂಭಣೆಯ ಮೆರವಣಿಗೆಗಳನ್ನು ನಿರ್ಬಂಧಿಸು
ವುದರಿಂದ ನಮಗೂ ಖುಷಿ ದೊರೆಯುವುದಿಲ್ಲ. ಆದರೆ ಅನಿವಾರ್ಯ
ವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲೇಬೇಕಿದೆ. ಕಳೆದೆರಡು ವರ್ಷಗಳಿಂದ ಎಲ್ಲರೂ ಸಹಕರಿಸಿದ್ದಾರೆ. ಈ ಬಾರಿಯೂ ಎಲ್ಲರೂ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಮಾರಕ ರೋಗ ನಿಯಂತ್ರಣಗೊಂಡಲ್ಲಿ, ಎಲ್ಲರೂ ವಿಜೃಂಭಣೆಯಿಂದ ಮೆರವಣಿಗೆ ಸಹಿತ ಆಚರಿಸಬಹುದು’ ಎಂದು ಹೇಳಿದರು.

ಡಿವೈಎಸ್‍ಪಿ ಬಸವರಾಜ್ ಅವರು ದಸರಾ ಹಾಗೂ ಈದ್‌ ಮಿಲಾದ್ ಹಬ್ಬ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಸಂದರ್ಭದಲ್ಲಿ ತಿಳಿಸಿದರು.

ಮೈಸೂರು ಹೊರತಾಗಿ ರಾಜ್ಯದ ಇತರೆಡೆ ನಡೆಸುವ ದಸರಾ ಕಾರ್ಯಕ್ರಮಗಳಲ್ಲಿ 400ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಈದ್‌ ಮಿಲಾದ್ ಹಬ್ಬವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನ ಒಮ್ಮೆಲೇ ಸೇರುವಂತಿಲ್ಲ. 60 ವರ್ಷಕ್ಕಿಂತ ಮೇಲಿನವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡುವ ವ್ಯವಸ್ಥೆ ಮಾಡಬೇಕು ಎಂದು ವಿವರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜೀವ್, ಕನಿಕಾ ಸಿಕ್ರಿವಾಲ, ಜಿಲ್ಲಾ ಯೋಜನಾಧಿಕಾರಿ ನಜ್ಮಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಆನಂದ್, ತಹಶೀಲ್ದಾರ್ ಗಿರೀಶ್‌ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT