ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲಿನ್ಯರಹಿತ ಸರಳ ದೀಪಾವಳಿ ಆಚರಿಸಿ

ಪಟಾಕಿ ಸಿಡಿಮದ್ದಿಗೆ ಸಂಬಂಧಿಸಿದ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಡಳಿತ
Last Updated 3 ನವೆಂಬರ್ 2020, 12:45 IST
ಅಕ್ಷರ ಗಾತ್ರ

ದಾವಣಗೆರೆ: ನ.14ರಿಂದ 17ರ ವರೆಗೆ ದೀಪಾವಳಿ ಹಬ್ಬ ಇರಲಿದೆ. ಕೊರೊನಾ ಕಾರಣದಿಂದ ಹಬ್ಬವನ್ನು ಸರಳವಾಗಿ ಮತ್ತು ಮಾಲಿನ್ಯ ರಹಿತವಾಗಿ ಆಚರಿಸಲು ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಮಾರ್ಗಸೂಚಿ ನೀಡಿದೆ. ಅದರಂತೆ ಎಲ್ಲಾ ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಹಬ್ಬದ ಸಮಯದಲ್ಲಿ ಮಾತ್ರ ಜಿಲ್ಲಾಡಳಿತವು ನಿಗದಿಪಡಿಸುವ ಸ್ಥಳದಲ್ಲಿ ಅಲ್ಪ ಪ್ರಮಾಣದಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿತ ಅವಧಿಗೆ ತಾತ್ಕಾಲಿಕ ಪರವಾನಿಗೆಯನ್ನು ನೀಡಲಾಗುತ್ತಿರುತ್ತದೆ. ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾರ್ಗಸೂಚಿ ಹೊರಡಿಸಿದ್ದಾರೆ. ಹಬ್ಬದ ಆಚರಣೆ ಮುಗಿಯುವವರೆಗೆ ಮಾತ್ರ ಈ ಆದೇಶ ಜಾರಿಯಲ್ಲಿರುತ್ತದೆ.

ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ತಾಲ್ಲೂಕು ಆಡಳಿತ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ, ಸಂಬಂಧಿಸಿದ ವಿವಿಧ ಇಲಾಖೆಗಳು ಈ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಾರ್ಗಸೂಚಿಗಳು

* ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡಬೇಕು.

* ನ.17ರ ವರೆಗೆ ಮಾತ್ರ ತೆರೆದಿರಬೇಕು.

* ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು.

* ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಇಲಾಖೆ, ಪ್ರಾಧಿಕಾರಗಳು ಅನುಮತಿ ನೀಡಬೇಕು.

* ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ6 ಮೀಟರ್ ಅಂತರವಿರಬೇಕು.

* ಪ್ರತಿಯೊಂದು ಮಳಿಗೆಗಳಲ್ಲಿ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಗಿದಾರರು ಸ್ಥಳದಲ್ಲಿ ಹಾಜರಿರಬೇಕು.

* ಪಟಾಕಿ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು.

* ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು.

* ಜನರ ನಡುವೆ 6 ಅಡಿ ಅಂತರ ಕಾಯ್ದುಕೊಳ್ಳಲು ಕ್ರಮಕೈಗೊಳ್ಳಬೇಕು.

* ವ್ಯಾಪಾರಸ್ತರು, ಜನರು ಕಡ್ಡಾಯವಾಗಿಮಾಸ್ಕ್‌ ಧರಿಸಬೇಕು.

* ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT