ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಬುಧವಾರ, ಜೂನ್ 26, 2019
29 °C
ಈದ್‌ ಉಲ್‌ ಫಿತ್ರ್‌: ಮುಸ್ಲಿಂ ಸಮುದಾಯದ ಸಾವಿರಾರು ಮಂದಿಯಿಂದ ಸಾಮೂಹಿಕ ಪ್ರಾರ್ಥನೆ

ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

Published:
Updated:
Prajavani

ದಾವಣಗೆರೆ: ನಗರದ ಪಿ.ಬಿ. ರಸ್ತೆಯ ಹಳೇ ಈದ್ಗಾ, ಮಾಗನಹಳ್ಳಿ ರಸ್ತೆಯ ರಜಾವುಲ್‌ ಮುಸ್ತಫಾ ನಗರದ ಹೊಸ ಈದ್ಗಾ ಹಾಗೂ ಎಸ್‌ಒಜಿ ಕಾಲೊನಿಯ ಖಲಂದರಿಯಾ ಈದ್ಗಾ ಬಳಿ ಬುಧವಾರ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದವರು ಬುಧವಾರ ರಂಜಾನ್‌ ಹಬ್ಬಕ್ಕೆ ತೆರೆ ಎಳೆದರು.

ಒಂದು ತಿಂಗಳು ಉಪವಾಸ ಆಚರಿಸಿದ ಬಳಿಕ ಜಕಾತ್‌, ಫಿತ್ರ ದಾನ ಮಾಡಿದರು.

ಶ್ವೇತವಸ್ತ್ರ ಧರಿಸಿ ಗುಂಪು ಗುಂಪಾಗಿ ಖಬರ್‌ಸ್ಥಾನ ಹಾಗೂ ಮಸೀದಿಗಳತ್ತ ಬಂದ ಮುಸ್ಲಿಮರು ಮೊದಲು ಸಿಹಿ ಹಂಚಿ, ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಹೊಸ ಬಟ್ಟೆಗಳಲ್ಲಿ, ಸಾಂಪ್ರದಾಯಿಕ ಪೋಷಾಕುಗಳಲ್ಲಿ ಕಂಗೊಳಿಸುತ್ತಿದ್ದ ಮಕ್ಕಳು ಹಬ್ಬದ ಸಂಭ್ರಮ ಹೆಚ್ಚಿಸಿದ್ದರು.

ಈದ್‌ ಉಲ್‌ ಫಿತ್ರ್‌ ಅಂಗವಾಗಿ ನಗರದ ಎಲ್ಲಾ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪಿ.ಬಿ. ರಸ್ತೆಯ ಹಳೇ ಈದ್ಗಾ ಮೈದಾನ ತುಂಬಿದ್ದರಿಂದ ಪಿ.ಬಿ. ರಸ್ತೆಯ ಎರಡು ಬದಿಗಳಲ್ಲೂ ಚಾಪೆ, ಚಾದರ ಹಾಸಿ, ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಈದ್ಗಾ ಮೈದಾನ ಸಮೀಪ ಸುಮಾರು ಅರ್ಧ ಕಿ.ಮೀ ಉದ್ದಕ್ಕೂ ಪಿ.ಬಿ. ರಸ್ತೆ ಶ್ವೇತ ವಸ್ತ್ರಧಾರಿಗಳಿಂದ ಕಂಗೊಳಿಸುತ್ತಿತ್ತು.

ಮುಸ್ಲಿಮರ ಪ್ರಾರ್ಥನೆಗೆ ಅನುವು ಮಾಡಿಕೊಡುವುದಕ್ಕಾಗಿ ಪಿ.ಬಿ. ರಸ್ತೆಯನ್ನು ಈ ಪ್ರದೇಶದಲ್ಲಿ ವಾಹನಗಳ ಓಡಾಟವನ್ನು ಪೊಲೀಸರು ನಿರ್ಬಂಧಿಸಿದರು. ಪರ್ಯಾಯ ರಸ್ತೆಗಳಲ್ಲಿ ವಾಹನ ಸಾಗಾಟಕ್ಕೆ ವ್ಯವಸ್ಥೆ ಮಾಡಿದರು. ಯಾವುದೇ ತೊಡಕುಂಟಾಗದಂತೆ ಪೊಲೀಸರು ಬಿಗಿ ಬಂದೋಬಸ್ತು ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್‌, ಇತರ ಅಧಿಕಾರಿಗಳು ರಂಜಾನ್‌ ಶುಭಾಶಯ ಕೋರಿದರು.

ಸಾಮೂಹಿಕ ಪ್ರಾರ್ಥನೆಯ ಬಳಿಕ ಕೆಲವರು ಖಬರ್‌ಸ್ಥಾನದಲ್ಲಿ ಇರುವ ತಮ್ಮ ಹಿರಿಯರ ಸಮಾಧಿಗೆ

ವಿಶೇಷ ಭೋಜನ: ತಿಂಗಳಿಡೀ ಉಪವಾಸ ಆಚರಿಸಿದ್ದ ಮುಸ್ಲಿಮರು, ಈದ್‌ ಉಲ್‌ ಫಿತ್ರ್‌ ದಿನ ವಿಶೇಷ ಊಟ ಸೇವಿಸಿದರು. ಶಾವಿಗೆ, ದ್ರಾಕ್ಷಿ, ಗೋಡಂಬಿ, ಬಾದಾಮಿ, ಸಕ್ಕರೆ, ಹಾಲು, ಗಸಗಸೆ, ಪಿಸ್ತಾ ಬಳಸಿ ತಯಾರಿಸುವ ವಿಶೇಷ ಸಿಹಿ ತಿಂಡಿಗಳು ಹಾಗೂ ಬಗೆಬಗೆಯ ಮಾಂಸಾಹಾರಗಳನ್ನು ಮನೆಯಲ್ಲೇ ಸಿದ್ಧಪಡಿಸಲಾಗಿತ್ತು.

ಸ್ನೇಹಿತರ, ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ಕೋರಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !